ADVERTISEMENT

ರಾಜ್ಯದಲ್ಲಿ ಪತ್ತೆಯಾಗಿದ್ದು ಮಂಕಿಪಾಕ್ಸ್ ಅಲ್ಲ, ಚಿಕನ್‌ಪಾಕ್ಸ್‌: ವರದಿಯಲ್ಲಿ ದೃಢ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 31 ಜುಲೈ 2022, 6:15 IST
Last Updated 31 ಜುಲೈ 2022, 6:15 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಬೆಂಗಳೂರಿಗೆ ಬಂದಿದ್ದ ಇಥಿಯೋಪಿಯಾ ಮೂಲದ ವ್ಯಕ್ತಿಯೊಬ್ಬರಲ್ಲಿ ಮಂಕಿಪಾಕ್ಸ್ ಲಕ್ಷಣಗಳು ಕಂಡುಬಂದಿದ್ದ ಹಿನ್ನೆಲೆಯಲ್ಲಿ ಅವರನ್ನು ಪರೀಕ್ಷೆಗೊಳಪಡಿಸಲಾಗಿತ್ತು. ಈಗ ಅವರ ಪರೀಕ್ಷಾ ವರದಿಯಲ್ಲಿ ಮಂಕಿಪಾಕ್ಸ್ ನೆಗಟಿವ್ ಎಂದು ಧೃಢಪಟ್ಟಿದ್ದು, ಚಿಕನ್‌ಪಾಕ್ಸ್ (ಸೀತಾಳೆ ಸಿಡುಬು)ಇರುವುದು ಪತ್ತೆಯಾಗಿದೆ.

ಈ ಕುರಿತು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಟ್ವಿಟರ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

‘ರಾಜ್ಯದಲ್ಲಿ ಮಂಕಿಪಾಕ್ಸ್ ತಡೆಗಟ್ಟುವ ನಿಟ್ಟಿನಲ್ಲಿ ಸೋಂಕು ಕಂಡು ಬಂದಿರುವ ದೇಶಗಳಿಂದ ಆಗಮಿಸುವ ಪ್ರಯಾಣಿಕರನ್ನು ವಿಮಾನ ನಿಲ್ದಾಣದಲ್ಲೇ ಜ್ವರ, ಶೀತ, ತಲೆನೋವು, ಸ್ನಾಯು ನೋವು, ಆಯಾಸ ಮತ್ತು ದುಗ್ಧರಸ ಗ್ರಂಥಿಗಳ ಊತ ಮುಂತಾದ ಲಕ್ಷಣಗಳ ಪತ್ತೆಗಾಗಿ ತಪಾಸಣೆ ನಡೆಸಲಾಗುತ್ತಿದೆ’ ಎಂದು ಸುಧಾಕರ್ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.