ADVERTISEMENT

ಎಚ್.ಡಿ. ದೇವೇಗೌಡರನ್ನು ಭೇಟಿಯಾದ ಮುಖ್ಯಮಂತ್ರಿ ಬೊಮ್ಮಾಯಿ

​ಪ್ರಜಾವಾಣಿ ವಾರ್ತೆ
Published 1 ಆಗಸ್ಟ್ 2021, 9:44 IST
Last Updated 1 ಆಗಸ್ಟ್ 2021, 9:44 IST
ಬಿಜೆಪಿ ಶಾಸಕ ವಿ. ಸೋಮಣ್ಣ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಜೆಡಿಎಸ್ ಶಾಸಕ ಎಚ್.ಡಿ. ರೇವಣ್ಣ
ಬಿಜೆಪಿ ಶಾಸಕ ವಿ. ಸೋಮಣ್ಣ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಜೆಡಿಎಸ್ ಶಾಸಕ ಎಚ್.ಡಿ. ರೇವಣ್ಣ   

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರನ್ನು ಭಾನುವಾರ ಭೇಟಿ ಮಾಡಿ ಮಾತುಕತೆ ನಡೆಸಿದರು.

ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಕೆಲಕಾಲ ಚರ್ಚೆ ನಡೆಸಿದರು. ಜೆಡಿಎಸ್ ಶಾಸಕ ಎಚ್.ಡಿ. ರೇವಣ್ಣ ಮತ್ತು ಬಿಜೆಪಿ ಶಾಸಕ ವಿ. ಸೋಮಣ್ಣ ಜತೆಗಿದ್ದರು.

ಬಸವರಾಜ ಬೊಮ್ಮಾಯಿ ಮೂಲತಃ ಜನತಾ ಪರಿವಾರದವರು. ಜನತಾ ದಳದಲ್ಲಿದ್ದಾಗ ರಾಜಕೀಯವಾಗಿ ದೇವೇಗೌಡರ ಒಡನಾಡಿಯಾಗಿದ್ದರು.ಜನತಾದಳವು ಜಾತ್ಯತೀತ ಜನತಾದಳ ಹಾಗೂ ಸಂಯುಕ್ತ ಜನತಾದಳ ಎಂದು ವಿಭಜನೆಯಾದಾಗ, ಗೌಡರ ಜತೆಗೆ ಹೋಗದ ಬೊಮ್ಮಾಯಿ, ಸಂಯುಕ್ತ ಜನತಾದಳದಲ್ಲಿ ಗುರುತಿಸಿಕೊಂಡಿದ್ದರು. 2008ರಲ್ಲಿ ಅವರು ಬಿಜೆಪಿ ಸೇರಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.