ADVERTISEMENT

ಹುಬ್ಬಳ್ಳಿ ಗಲಭೆಗೆ ಸಂಬಂಧಿಸಿದ ಎಲ್ಲರನ್ನೂ ಬಂಧಿಸಿದ್ದೇವೆ: ಸಿಎಂ ಬೊಮ್ಮಾಯಿ

​ಪ್ರಜಾವಾಣಿ ವಾರ್ತೆ
Published 18 ಏಪ್ರಿಲ್ 2022, 6:39 IST
Last Updated 18 ಏಪ್ರಿಲ್ 2022, 6:39 IST
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌   

ಬೆಂಗಳೂರು: 'ಹುಬ್ಬಳ್ಳಿ ಘಟನೆಗೆ ಸಂಬಂಧಿಸಿದಂತೆ ಎಲ್ಲರನ್ನೂ ಬಂಧಿಸಿದ್ದೇವೆ. ಪ್ರಕರಣದ ತನಿಖೆ ನಡೆಯುತ್ತಿದೆ. ಇದರ ಹಿಂದೆ ಯಾರು ಇದ್ದಾರೆ, ಯಾವ ನಾಯಕರು ಇದ್ದಾರೆ,ಯಾರು ತಪ್ಪಿತಸ್ಥರಿದ್ದಾರೆ ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳುತ್ತೇವೆ' ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು.

ಸುದ್ದಿಗಾರರ ಜೊತೆ ಸೋಮವಾರ ಬೆಳಿಗ್ಗೆ ಅವರು ಮಾತನಾಡಿದರು.

ಪಿಎಸ್ಐ ನೇಮಕಾತಿಯಲ್ಲಿನ ಅಕ್ರಮದಕುರಿತು ಪ್ರತಿಕ್ರಿಯಿಸಿದ ಮುಖ್ಯಮಂತ್ರಿ,'ಅಕ್ರಮ ನಡೆದ ಬಗ್ಗೆ ಹಲವು ದೂರುಗಳು ಬಂದಿದ್ದವು. ತಕ್ಷಣ ಗೃಹ ಸಚಿವರು ಸಿಐಡಿಗೆ ತನಿಖೆ ವಹಿಸಿದ್ದಾರೆ. ನಾವೇ ನಿಷ್ಪಕ್ಷಪಾತ ತನಿಖೆ ಆಗಬೇಕು ಎಂದು ಸಿಐಡಿಗೆ ಕೊಟ್ಟಿದ್ದೇವೆ. ಸಮಗ್ರವಾಗಿ ತನಿಖೆ ಮಾಡಲು ಆದೇಶ ಕೊಟ್ಟಿದ್ದೇನೆ. ಬೇರೆ ಸರ್ಕಾರವಾದರೆ ಮುಚ್ಚಿ ಹಾಕುವ ಪ್ರಯತ್ನ ಮಾಡುತ್ತಿದ್ದರು. ನಮ್ಮ ಗಮನಕ್ಕೆ ಬಂದ ತಕ್ಷಣ ಸಿಐಡಿಗೆ ಕೊಟ್ಟಿದ್ದೇವೆ. ಯಾರೇ ತಪಿತಸ್ಥರಿದ್ದರೂ ಅವರ ಮೇಲೆ ಕ್ರಮ ಕೈಗೊಳ್ಳುತ್ತೇವೆ' ಎಂದರು.

ADVERTISEMENT

ಮತ್ತೆ ಪರೀಕ್ಷೆ ಮಾಡಿ ಎಂಬ ಒತ್ತಾಯಕ್ಕೆ ಪ್ರತಿಕ್ರಿಯಿಸಿದ ಅವರು, 'ಸಿಐಡಿ ವರದಿ ಬಳಿಕ ಮುಂದಿನ ಕ್ರಮ ಕೈಗೊಳ್ಳುತ್ತೇವೆ‌‌' ಎಂದರು.

ಸಂಪುಟ ಪುನರಚನೆ ಕುರಿತು ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, 'ದೆಹಲಿಗೆ ಹೋದ ನಂತರ ಸಭೆ ಮಾಡಿ ತಿಳಿಸುತ್ತೇವೆಂದು ನಡ್ಡಾ ಹೇಳಿದ್ದಾರೆ. ಅ ಮೇಲೆ ನೀವು ಬನ್ನಿ ಎಂದು ಹೇಳಿದ್ದಾರೆ' ಎಂದರು.

ಪುನಾರಚನೆಯೋ ಅಥವಾ ವಿಸ್ತರಣೆಯೋ ಎಂಬ ಪ್ರಶ್ನೆಗೆ'ಎಲ್ಲವೂ ಅಲ್ಲಿ (ದೆಹಲಿಯಲ್ಲಿ) ತೀರ್ಮಾನವಾಗುತ್ತದೆ' ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.