ADVERTISEMENT

ಆಲಮಟ್ಟಿ| ಕೃಷ್ಣೆಗೆ ಬಾಗಿನ ಅರ್ಪಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

​ಪ್ರಜಾವಾಣಿ ವಾರ್ತೆ
Published 21 ಆಗಸ್ಟ್ 2021, 6:25 IST
Last Updated 21 ಆಗಸ್ಟ್ 2021, 6:25 IST
   

ವಿಜಯಪುರ: ಆಲಮಟ್ಟಿಯ ಲಾಲ್ ಬಹಾದ್ದೂರ್ ಶಾಸ್ತ್ರಿ ಸಾಗರಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶನಿವಾರ ಬಾಗಿನ ಅರ್ಪಿಸಿದರು.

ಬಾಗಿನ ಅರ್ಪಿಸುವುದಕ್ಕೂ ಮುನ್ನಾ ಬೊಮ್ಮಾಯಿ ಅವರು ಕೃಷ್ಣೆಗೆ ವಿಶೇಷ ಪೂಜೆ ಸಲ್ಲಿಸಿದರು. ನಾಡಿಗೆ ಉತ್ತಮ ಮಳೆ, ಬೆಳೆಯಾಗಿ ಸಮೃದ್ಧವಾಗಲಿ ಎಂದು ಬೇಡಿಕೊಂಡರು.

ಬಾಗಿನ ಅರ್ಪಿಸುವ ಮುನ್ನಾ ಮುಖ್ಯಮಂತ್ರಿ ಅವರನ್ನು ವಾದ್ಯ ಮೇಳಗಳೊಂದಿಗೆ ಜಲಾಶಯಕ್ಕೆ ಸ್ವಾಗತಿಸಲಾಯಿತು.
ತಳಿರು,ತೋರಣ, ರಂಗೋಲಿಯಿಂದ ಜಲಾಶಯದ ಆವರಣವನ್ನು ಅಲಂಕರಿಸಲಾಗಿತ್ತು.

ADVERTISEMENT

ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಆಲಮಟ್ಟಿಗೆ ಆಗಮಿಸಿದ ಬೊಮ್ಮಾಯಿ ಅವರನ್ನು ಸ್ವಾಗತಿಸುವ ಬ್ಯಾನರ್, ಫ್ಲೆಕ್ಸ್ ಗಳು ಎಲ್ಲೆಲ್ಲೂ ರಾರಾಜಿಸುತ್ತಿದ್ದವು. ಮುಖ್ಯ ಮಂತ್ರಿ ಭೇಟಿ ಹಿನ್ನೆಲೆಯಲ್ಲಿ ಆಲಮಟ್ಟಿ ಜಲಾಶಯ, ಉದ್ಯಾನ ವೀಕ್ಷಣೆಗೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿತ್ತು. ಪೊಲೀಸ್ ಭದ್ರತೆ ಬಿಗಿಗೊಳಿಸಲಾಗಿತ್ತು.

ಕೋವಿಡ್ ಹಿನ್ನೆಲೆಯಲ್ಲಿ ಸೀಮಿತ ಸಂಖ್ಯೆಯ ಅಧಿಕಾರಿಗಳು, ಜನಪ್ರತಿನಿಧಿಗಳಿಗೆ ಅವಕಾಶ ಕಲ್ಪಿಸಲಾಗಿತ್ತು.

ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಸಚಿವರಾದ ಶಶಿಕಲಾ ಜೊಲ್ಲೆ, ಮುರುಗೇಶ ನಿರಾಣಿ, ಉಮೇಶ ಕತ್ತಿ, ಶಾಸಕರಾದ ಶಿವಾನಂದ ಪಾಟೀಲ, ಎ.ಎಸ್.ಪಾಟೀಲ ನಡಹಳ್ಳಿ, ಸೋಮನಗೌಡ ಪಾಟೀಲ ಸಾಸನೂರ, ಯಶವಂತರಾಯಗೌಡ ಪಾಟೀಲ, ವೀರಣ್ಣ ಚರಂತಿಮಠ, ಸಿದ್ದು ಸವದಿ, ದೊಡ್ಡನಗೌಡ ಪಾಟೀಲ, ವಿಧಾನ ಪರಿಷತ್ ಸದಸ್ಯರಾದ ಅರುಣ್ ಶಹಾಪುರ, ಹನುಮಂತ ನಿರಾಣಿ ವಿಜಯಪುರ ಸಂಸದ ರಮೇಶ ಜಿಗಜಿಣಗಿ, ಬಾಗಲಕೋಟೆ ಪಿ.ಸಿ.ಗದ್ದಿಗೌಡರ, ವಿಧಾನ ಪರಿಷತ್ ಸದಸ್ಯ ಪ್ರಕಾಶ ರಾಠೋಡ, ವಿಜಯಪುರ ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್, ಎಸ್.ಪಿ. ಆನಂದಕುಮಾರ್, ಜಿಲ್ಲಾ ಪಂಚಾಯಿತಿ ಸಿಇಒ ಗೋವಿಂದರೆಡ್ಡಿ , ಬಾಗಲಕೋಟೆ ಜಿಲ್ಲಾಧಿಕಾರಿ ಕ್ಯಾಪ್ಟನ್‌ ರಾಜೇಂದ್ರ ಕುಮಾರ್, ಎಸ್ ಪಿ ಲೋಕೇಶ ಜಗಲಾಸರ ಹಾಗೂ ಬೆಳಗಾವಿ ಉತ್ತರ ವಲಯ ಐಜಿಪಿ ಸತೀಶ್ ಕುಮಾರ್ ಇದ್ದರು.

ಸಭೆ: ಬಾಗಿನ ಕಾರ್ಯಕ್ರಮದ ಬಳಿಕ ವಿಜಯಪುರ-ಬಾಗಲಕೋಟೆಯ ಜನಪ್ರತಿನಿಧಿಗಳು, ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.