ADVERTISEMENT

ಶೂ, ಸಾಕ್ಸ್ ವಿತರಿಸಲು ₹132 ಕೋಟಿ ಪ್ರಸ್ತಾವಕ್ಕೆ ಅನುಮೋದನೆ: ಸಿಎಂ ಬೊಮ್ಮಾಯಿ

ಕೋವಿಡ್ ಸಮಯದಲ್ಲಿ ಭಿಕ್ಷೆ ಬೇಡಿದ ಹಣ ಎಲ್ಲಿ? ಡಿ.ಕೆ.ಶಿವಕುಮಾರ್‌ಗೆ ಪ್ರಶ್ನೆ

​ಪ್ರಜಾವಾಣಿ ವಾರ್ತೆ
Published 8 ಜುಲೈ 2022, 13:13 IST
Last Updated 8 ಜುಲೈ 2022, 13:13 IST
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ   

ಬೆಂಗಳೂರು: ‘ಶಾಲಾ ಮಕ್ಕಳಿಗೆ ಶೂ ಮತ್ತು ಸಾಕ್ಸ್ ವಿತರಿಸಲು ₹ 132 ಕೋಟಿ ಮೊತ್ತದ ಪ್ರಸ್ತಾವನೆಗೆ ಅನುಮೋದನೆ ನೀಡಲಾಗಿದೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

‘ಸರ್ಕಾರ ಈಗಾಗಲೇ ಸಮವಸ್ತ್ರ ವಿತರಿಸಲು ಅನುಮೋದನೆ ನೀಡಿದೆ. ಸಮವಸ್ತ್ರ ತಯಾರಾಗಲು ಸ್ವಲ್ಪ ಸಮಯ ಬೇಕಾಗುತ್ತದೆ. ನಂತರ ವಿತರಣೆಯಾಗಲಿದೆ. ಈ ವಿಷಯದಲ್ಲಿ ಯಾವುದೇ ಗೊಂದಲ ಸೃಷ್ಟಿಸುವ ಅಗತ್ಯವಿಲ್ಲ’ ಎಂದು ಶುಕ್ರವಾರ ಸುದ್ದಿಗಾರರಿಗೆ ತಿಳಿಸಿದರು.

ಭಿಕ್ಷೆ ಬೇಡಿರುವ ಹಣ ಎಲ್ಲಿ?
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು,‘ಈ ಹಿಂದೆ ಕೋವಿಡ್ ಸಮಯದಲ್ಲಿ ಭಿಕ್ಷೆ ಬೇಡಿ ಜನರಿಗೆ ಕೊಡುತ್ತೇವೆ ಎಂದು ಅವರು ಹೇಳಿದ್ದರು‌. ಆ ಹಣ ಎಲ್ಲಿ? ಎಂದಿನಂತೆಯೇ ಇದು ಕೂಡ’ ಎಂದು ತಿಳಿಸಿದರು.

ADVERTISEMENT

ಶಾಲಾ ವಿದ್ಯಾರ್ಥಿಗಳಿಗೆ ಶೂ, ಸಾಕ್ಸ್‌ ವಿತರಿಸಲು ಸರ್ಕಾರದ ಬಳಿ ಹಣ ಇಲ್ಲದಿದ್ದರೆ ಬಹಿರಂಗವಾಗಿ ಹೇಳಲಿ. ರಾಜ್ಯದ ಜನರ ಬಳಿ ಭಿಕ್ಷೆ ಬೇಡಿ ಮಕ್ಕಳಿಗೆ ಶೂ, ಸಾಕ್ಸ್‌ ಕೊಡಿಸುವೆ ಎಂದುಡಿ.ಕೆ. ಶಿವಕುಮಾರ್‌ ಹೇಳಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.