ADVERTISEMENT

ಉಕ್ರೇನ್‌: ರಾಜ್ಯದ ವಿದ್ಯಾರ್ಥಿಗಳೊಂದಿಗೆ ದೂರವಾಣಿ ಮೂಲಕ ಮಾತನಾಡಿದ ಬೊಮ್ಮಾಯಿ

​ಪ್ರಜಾವಾಣಿ ವಾರ್ತೆ
Published 3 ಮಾರ್ಚ್ 2022, 13:21 IST
Last Updated 3 ಮಾರ್ಚ್ 2022, 13:21 IST
   

ಬೆಂಗಳೂರು: ಉಕ್ರೇನ್‌ನ ಕಾರ್ಕೀವ್‌ ನಗರದಲ್ಲಿ ರಾಜ್ಯದ ಸುಮಾರು 200 ವಿದ್ಯಾರ್ಥಿಗಳು ಇದ್ದು, ಅವರನ್ನು ಆದಷ್ಟು ಬೇಗ ಕರೆ ತರುವ ವ್ಯವಸ್ಥೆ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಉಕ್ರೇನ್‌ನಲ್ಲಿರುವ ವಿದ್ಯಾರ್ಥಿಗಳ ಜತೆ ಗುರುವಾರ ದೂರವಾಣಿ ಮೂಲಕ ಮಾತನಾಡಿ ಅವರ ಸಮಸ್ಯೆಗಳನ್ನು ಆಲಿಸಿದರು.

ತಮ್ಮ ಪರಿಸ್ಥಿತಿಯನ್ನು ವಿವರಿಸಿದ ವಿದ್ಯಾರ್ಥಿಗಳು, ಕಾರ್ಕೀವ್‌ ನಗರದಿಂದ 30 ಕಿ.ಮೀ ದೂರದ ಪ್ರದೇಶಕ್ಕೆ ನಡೆದುಕೊಂಡೇ ಬಂದಿದ್ದೇವೆ. ಸದ್ಯಕ್ಕೆ ಸುರಕ್ಷಿತವಾಗಿರುವುದಾಗಿ ಬೊಮ್ಮಾಯಿ ಅವರಿಗೆ ವಿವರಿಸಿದರು.

ADVERTISEMENT

ಸಂಕಷ್ಟದ ಈ ಸಂದರ್ಭದಲ್ಲಿ ಧೈರ್ಯವಾಗಿರಬೇಕು. ವಿದೇಶಾಂಗ ಸಚಿವಾಲಯದ ಅಧಿಕಾರಿಗಳ ಜತೆ ಮಾತನಾಡಿದ್ದೇನೆ. ಎಲ್ಲರನ್ನೂ ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರುವ ವ್ಯವಸ್ಥೆ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಭರವಸೆ ನೀಡಿದರು.

ಇವುಗಳನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.