ADVERTISEMENT

ಮಳೆಯಿಂದ ಹಾನಿಗೊಳಗಾದ ಜಿಲ್ಲೆಗಳಿಗೆ 2 ದಿನ ಪ್ರವಾಸ: ಸಿಎಂ ಬಸವರಾಜ ಬೊಮ್ಮಾಯಿ

​ಪ್ರಜಾವಾಣಿ ವಾರ್ತೆ
Published 11 ಜುಲೈ 2022, 7:22 IST
Last Updated 11 ಜುಲೈ 2022, 7:22 IST
   

ಬೆಂಗಳೂರು: ಭಾರಿ ಮಳೆಯಿಂದಾಗಿ ಹಾನಿಗೆ ಒಳಗಾದ ಜಿಲ್ಲೆಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ಹಾಗೂ ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.

ಸುದ್ದಿಗಾರರ ಜೊತೆ ಸೋಮವಾರ ಮಾತನಾಡಿದ ಅವರು, ‘ಕೊಡಗು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಗೆ ತೆರಳಿ ಮಳೆ ಹಾನಿ ಪರಿಶೀಲನೆ ನಡೆಸುತ್ತೇನೆ’ ಎಂದರು.

‘ಮಂಗಳವಾರ ಕೊಡಗು ಪ್ರವಾಸ ಕೈಗೊಂಡು ಮಳೆ ಹಾನಿ ಹಾಗೂ ಭೂ ಕುಸಿತ ಪರಿಶೀಲನೆ ನಡೆಸಲಾಗುವುದು. ಅಧಿಕಾರಿಗಳ ಜೊತೆಗೂ ಸಭೆ ನಡೆಸಲಾಗುವುದು. ಸಂತ್ರಸ್ತರ ಜೊತೆಗೂ ಮಾತನಾಡಿ ಸಮಸ್ಯೆಗೆ ಪರಿಹಾರ ಕಲ್ಪಿಸಲಾಗುವುದು’ ಎಂದರು.

ADVERTISEMENT

‘ಮಂಗಳವಾರ ಮಂಗಳೂರಿನಲ್ಲಿ ವಾಸ್ತವ್ಯ ಹೂಡಿ, ಬುಧವಾರ ಮಂಗಳೂರು, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗೆ ಭೇಟಿ ನೀಡಲಾಗುವುದು. ಈ ವೇಳೆ ಅಧಿಕಾರಿಗಳಿಗೆ ಅಗತ್ಯ ಸೂಚನೆ ನೀಡುತ್ತೇನೆ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.