ADVERTISEMENT

ನಾಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಾರಣಾಸಿಗೆ ಭೇಟಿ

​ಪ್ರಜಾವಾಣಿ ವಾರ್ತೆ
Published 11 ಡಿಸೆಂಬರ್ 2021, 19:45 IST
Last Updated 11 ಡಿಸೆಂಬರ್ 2021, 19:45 IST
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ   

ಬೆಂಗಳೂರು: ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಉಪ ಮುಖ್ಯಮಂತ್ರಿಗಳ ಸಮ್ಮೇಳನದಲ್ಲಿ ಪಾಲ್ಗೊಳ್ಳುವುದಕ್ಕಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ಸಂಜೆ ಉತ್ತರ ಪ್ರದೇಶದ ವಾರಣಾಸಿಗೆ ತೆರಳುವರು.

ಮಂಗಳವಾರ ವಾರಣಾಸಿಯಲ್ಲಿ ಬಿಜೆಪಿಅಧಿಕಾರದಲ್ಲಿರುವ ರಾಜ್ಯಗಳ ಮುಖ್ಯಮಂತ್ರಿಗಳು ಹಾಗೂ ಉಪ ಮುಖ್ಯಮಂತ್ರಿಗಳ ಸಮ್ಮೇಳನ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ಈ ಸಮ್ಮೇಳನದಲ್ಲಿ ಪಾಲ್ಗೊಳ್ಳುವರು. ‘ಉತ್ತಮ ಆಡಳಿತ’ ಕುರಿತು ಸಮ್ಮೇಳನದಲ್ಲಿ ಚರ್ಚೆ ನಡೆಯಲಿದೆ.

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಸೋಮವಾರ ಬೆಳಿಗ್ಗೆ ಆರಂಭವಾಗುವ ವಿಧಾನಮಂಡಲ ಅಧಿವೇಶನದಲ್ಲಿ ಮುಖ್ಯಮಂತ್ರಿ ಪಾಲ್ಗೊಳ್ಳುವರು. ಅದೇ ದಿನ ಸಂಜೆ ವಾರಣಾಸಿಗೆ ತೆರಳುವರು. ಮಂಗಳವಾರ ಸಂಜೆ ಬೆಳಗಾವಿಗೆ ವಾಪಸಾಗುವರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.