ADVERTISEMENT

ಶೀಘ್ರದಲ್ಲಿ ಸಂಪುಟ ವಿಸ್ತರಣೆಗೆ ಅನುಮತಿ ನಿರೀಕ್ಷೆ: ಬಿ.ಎಸ್.ಯಡಿಯೂರಪ್ಪ

​ಪ್ರಜಾವಾಣಿ ವಾರ್ತೆ
Published 20 ನವೆಂಬರ್ 2020, 3:09 IST
Last Updated 20 ನವೆಂಬರ್ 2020, 3:09 IST
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ   

ಬೆಂಗಳೂರು: ‘ಸಂಪುಟ‌‌ ವಿಸ್ತರಣೆ ಸಂಬಂಧ ಪಕ್ಷದ ವರಿಷ್ಠರ ಜತೆ ಚರ್ಚಿಸಿ ಬಂದಿದ್ದೇನೆ. ಎರಡು, ಮೂರು ದಿನಗಳಲ್ಲಿ ದೆಹಲಿಯಿಂದ ಪಟ್ಟಿ ಬರಬಹುದು’ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.

ಮುಖ್ಯಮಂತ್ರಿಯವರ ಗೃಹ ಕಚೇರಿ ಕೃಷ್ಣಾದಲ್ಲಿ ಗುರುವಾರ ‘ಹೊಯ್ಸಳ ಕ್ಯಾಬ್’ ಸೇವೆಗೆ ಚಾಲನೆ ನೀಡಿದ ಬಳಿಕ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ‘ದೆಹಲಿಯಿಂದ ಪಟ್ಟಿ ಬರಬೇಕು. ಆ ಬಳಿಕವೇ ಮುಂದಿನ ಪ್ರಕ್ರಿಯೆ ಆರಂಭಿಸಬಹುದು’ ಎಂದರು.

ADVERTISEMENT

ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳುವ ಲಿಂಕ್:ಆಂಡ್ರಾಯ್ಡ್ ಆ್ಯಪ್|ಐಒಎಸ್ ಆ್ಯಪ್

ಕನ್ನಡತಿ ಸುಧಾ ಉಮಾಶಂಕರ್ ಅವರು ಆ್ಯಪ್ ಆಧಾರಿತ ಹೊಯ್ಸಳ ಕ್ಯಾಬ್ ಸೇವೆ ಆರಂಭಿಸಿರುವುದು ಸ್ವಾಗತಾರ್ಹ. ಈವರೆಗೂ ನಗರಗಳಿಗೆ ಸೀಮಿತವಾಗಿದ್ದ ಆ್ಯಪ್‌ ಆಧಾರಿತ ಕ್ಯಾಬ್ ಸೇವೆ ಇನ್ನುಮುಂದೆ ರಾಜ್ಯದ ಎಲ್ಲ ಭಾಗಕ್ಕೂ ದೊರೆಯಲಿದೆ ಎಂದು ಯಡಿಯೂರಪ್ಪ ಹೇಳಿದರು.

5,000 ಕ್ಯಾಬ್ ಗಳೊಂದಿಗೆ ಈ ಸೇವೆ ಆರಂಭವಾಗುತ್ತಿದೆ. ಇದರಿಂದ ನೇರವಾಗಿ 5,000 ಜನರಿಗೆ ಉದ್ಯೋಗ ದೊರೆಯಲಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.