ಬೆಂಗಳೂರು: ಕಾರ್ಮಿಕ ಬಂಧುಗಳಿಗೆ ಕಾರ್ಮಿಕ ದಿನಾಚರಣೆಯ ಶುಭಾಶಯಗಳು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.
ಕೋವಿಡ್- 19 ಸೋಂಕಿನಿಂದ ದೇಶದಾದ್ಯಂತ ಆರ್ಥಿಕ ಚಟುವಟಿಕೆಗಳು ಬಹುತೇಕ ಸ್ತಬ್ಧವಾಗಿದ್ದವು. ಇದರಿಂದ ದುಡಿದು ತಿನ್ನುವ ಕಾರ್ಮಿಕ ಬಂಧುಗಳು ಹೆಚ್ಚಿನ ತೊಂದರೆ ಅನುಭವಿಸಬೇಕಾಯಿತು. ಇಂತಹ ಕಠಿಣ ಸಂದರ್ಭದಲ್ಲಿ ಸರ್ಕಾರ ನಿಮ್ಮ ಬೆನ್ನಿಗೆ ನಿಂತಿದೆ ಎಂದಿದ್ದಾರೆ.
ನಿಮ್ಮೆಲ್ಲರ ಸಹಕಾರದಿಂದ ಇತರ ದೇಶಗಳಿಗೆ ಹೋಲಿಸಿದರೆ ಭಾರತದಲ್ಲಿ ಕೋವಿಡ್ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಶೀಘ್ರದಲ್ಲಿಯೇ ಆರ್ಥಿಕ ಚಟುವಟಿಕೆಗಳು ಮತ್ತೆ ಪ್ರಾರಂಭವಾಗುವ ನಿರೀಕ್ಷೆ ಇದೆ. ಈ ನಿಟ್ಟಿನಲ್ಲಿ ಸರ್ಕಾರ ಈಗಾಗಲೇ ವಾಣಿಜ್ಯೋದ್ಯಮಿಗಳೊಂದಿಗೆ ಸಭೆ ನಡೆಸಿದ್ದು, ಕಾರ್ಮಿಕರ ಹಿತ ಕಾಯುವ ಹಾಗೂ ವೇತನ ಪಾವತಿ ಮಾಡುವಂತೆ ಮನವಿ ಮಾಡಿದೆ. ಆದ್ದರಿಂದ ವಲಸೆ ಕಾರ್ಮಿಕರು ಆತಂಕಕ್ಕೆ ಒಳಗಾಗದೆ ಕೇಂದ್ರ ಸರ್ಕಾರದ ಸೂಚನೆ ಬಂದೊಡನೆ ಕೈಗಾರಿಕೆ ಹಾಗೂ ವಾಣಿಜ್ಯ ಚಟುವಟಿಕೆ ಪುನರಾರಂಭ ಮಾಡಲು ಸಹಕರಿಸುವಂತೆ ಮನವಿ ಮಾಡುತ್ತೇನೆ ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.