ಬೆಂಗಳೂರು: ಆಮ್ ಆದ್ಮಿ ಪಾರ್ಟಿಯ ರಾಜ್ಯ ಘಟಕದ ಅಧ್ಯಕ್ಷರಾಗಿ ನೇಮಕಗೊಂಡಿರುವ ನಟ ‘ಮುಖ್ಯಮಂತ್ರಿ’ ಚಂದ್ರು ಅವರು ಜುಲೈ 22ರಂದು ನಡೆಯುವ ಪದಗ್ರಹಣ ಸಮಾರಂಭದಲ್ಲಿ ಅಧಿಕಾರ ಸ್ವೀಕರಿಸಲಿದ್ದಾರೆ.
ನಗರದ ಭಾರತ್ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ಸಭಾಂಗಣದಲ್ಲಿ ಪದಗ್ರಹಣ ಸಮಾರಂಭ ನಡೆಯಲಿದೆ. ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪಂಕಜ್ ಗುಪ್ತ, ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿಯಾಗಿರುವ ರಾಜ್ಯಸಭಾ ಸದಸ್ಯ ಸಂದೀಪ್, ರಾಜ್ಯ ಉಸ್ತುವಾರಿ ದಿಲೀಪ್ ಪಾಂಡೆ, ರಾಷ್ಟ್ರೀಯ ಜಂಟಿ ಕಾರ್ಯದರ್ಶಿ ಪೃಥ್ವಿ ರೆಡ್ಡಿ ಭಾಗವಹಿಸುವರು ಎಂದು ಎಎಪಿ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ. ಸದಂ ಸುದ್ದಿಗೋಷ್ಠಿಯಲ್ಲಿ ಬುಧವಾರ ಮಾಹಿತಿ ನೀಡಿದರು.
ರಾಜ್ಯ ಸಂಘಟನಾ ಕಾರ್ಯದರ್ಶಿಗಳಾಗಿ ಆಯ್ಕೆಯಾಗಿರುವ ಬಿ.ಟಿ. ನಾಗಣ್ಣ ಹಾಗೂ ಅರ್ಜುನ್ ಪರಪ್ಪ ಹಲಗಿ ಗೌಡರ ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ವಿವರಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.