ADVERTISEMENT

CM ಪ್ರಾಸಿಕ್ಯೂಷನ್: ರಾಜ್ಯಪಾಲರು ಅನುಮತಿಸಿದರೆ ಹೈಕೋರ್ಟ್ ಮೆಟ್ಟಿಲೇರಲು ತೀರ್ಮಾನ

​ಪ್ರಜಾವಾಣಿ ವಾರ್ತೆ
Published 1 ಆಗಸ್ಟ್ 2024, 7:56 IST
Last Updated 1 ಆಗಸ್ಟ್ 2024, 7:56 IST
<div class="paragraphs"><p>ಮುಖ್ಯಮಂತ್ರಿ ನಿವಾಸದಲ್ಲಿ ನಡೆದ ಸಚಿವರ ಸಭೆ</p></div>

ಮುಖ್ಯಮಂತ್ರಿ ನಿವಾಸದಲ್ಲಿ ನಡೆದ ಸಚಿವರ ಸಭೆ

   

ಬೆಂಗಳೂರು: ಮುಡಾ ಬದಲಿ ನಿವೇಶನ ಹಂಚಿಕೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಯ ಪ್ರಾಸಿಕ್ಯೂಷನ್‌ಗೆ  ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಅನುಮತಿ ನೀಡಿದರೆ ಹೈಕೋರ್ಟ್ ಮೆಟ್ಟಿಲೇರಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಾಗಿದ್ದಾರೆ.

ಮುಖ್ಯಮಂತ್ರಿ ನಿವಾಸದಲ್ಲಿ ಗುರುವಾರ ಬೆಳಿಗ್ಗೆ ನಡೆದ ಸಚಿವರ ಜೊತೆಗಿನ ಉಪಾಹಾರ ಕೂಟದಲ್ಲಿ ಈ ವಿಚಾರ ಚರ್ಚೆಯಾಗಿದೆ. ಮುಖ್ಯಮಂತ್ರಿ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡುವ ಸಾಧ್ಯತೆಯ ಬಗ್ಗೆಯೂ ಸಮಾಲೋಚನೆ ನಡೆದಿದೆ. ಈಗಾಗಲೇ ನೀಡಿರುವ ನೋಟಿಸ್‌ ಅನ್ನು ವಾಪಸ್‌ ಪಡೆಯುವಂತೆ ಮನವಿ ಮಾಡಲು ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳುವ ಬಗ್ಗೆಯೂ ಚರ್ಚೆಯಾಗಿದೆ.

ADVERTISEMENT

ಸಚಿವ ಸಂಪುಟ ಸಭೆಯಲ್ಲಿಯೂ ಈ ವಿಷಯ ಚರ್ಚೆಯಾಗಲಿದೆ. ರಾಜ್ಯಪಾಲರ ನಡೆ ವಿರೋಧಿಸಿ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳಲು ಕೂಡ ಉಪಾಹಾರ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಮುಡಾ ವಿಚಾರದಲ್ಲಿ ಮುಖ್ಯಮಂತ್ರಿಗೆ ಸಚಿವರು ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ್ದಾರೆ.

ಸಂಪುಟ ಸಭೆಯ ಬಳಿಕ ರಾಜ್ಯಪಾಲರ ನಡೆ, ಸಂಪುಟ ಸಭೆಯ ನಿರ್ಣಯ, ಮುಂದಿನ ಕಾನೂನು ಹೋರಾಟ ಸೇರಿದಂತೆ ಹಲವು ವಿಚಾರಗಳ ಕುರಿತು ಸಚಿವರು ಮಾಹಿತಿ ಹಂಚಿಕೊಳ್ಳಲಿದ್ದಾರೆ ಎಂದು ಮೂಲಗಳು ಹೇಳಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.