ADVERTISEMENT

ಧರ್ಮೇಗೌಡ ಸಾವಿಗೆ ದಿಗ್ಭ್ರಮೆ ವ್ಯಕ್ತಪಡಿಸಿದ ಯಡಿಯೂರಪ್ಪ, ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 29 ಡಿಸೆಂಬರ್ 2020, 3:28 IST
Last Updated 29 ಡಿಸೆಂಬರ್ 2020, 3:28 IST
   

ಬೆಂಗಳೂರು: ವಿಧಾನ ಪರಿಷತ್ ಉಪ ಸಭಾಪತಿ ಸಾವಿನ ಬಗ್ಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ದಿಗ್ಬ್ರಮೆ ವ್ಯಕ್ತಪಡಿಸಿದ್ದಾರೆ.

ವಿಧಾನಪರಿಷತ್ ಉಪಸಭಾಪತಿ ಶ್ರೀ ಎಸ್.ಎಲ್.ಧರ್ಮೇಗೌಡರ ನಿಧನದ ಸುದ್ದಿ ದಿಗ್ಭ್ರಮೆ ಮೂಡಿಸಿದೆ. ಇದನ್ನು ನಂಬಲಿಕ್ಕೇ ಸಾಧ್ಯವಾಗುತ್ತಿಲ್ಲ. ಶಾಸಕರಾಗಿ, ಉಪಸಭಾಪತಿಗಳಾಗಿ ಜನಮನ್ನಣೆ ಗಳಿಸಿದ್ದ ಅವರ ದುರಂತ ಅಂತ್ಯ ಅತ್ಯಂತ ದುಃಖವನ್ನುಂಟು ಮಾಡಿದೆ. ಹಿರಿಯ ಅಧಿಕಾರಿಗಳಿಂದ ಘಟನೆಯ ವಿವರ ಪಡೆದುಕೊಳ್ಳುತ್ತಿದ್ದೇನೆ. ಅವರ ಆತ್ಮಕ್ಕೆ ಸದ್ಗತಿಯನ್ನು ಕೋರುತ್ತಾ, ಅವರ ಕುಟುಂಬದವರಿಗೆ ಮತ್ತು ಅಭಿಮಾನಿಗಳಿಗೆ ಈ ನೋವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಮುಖ್ಯಮಂತ್ರಿ ಟ್ವೀಟ್ ಮಾಡಿದ್ದಾರೆೆ.

ವಿಧಾನ ಪರಿಷತ್ ಉಪಸಭಾಪತಿ ಎಸ್.ಎಲ್. ಧರ್ಮೇಗೌಡ ಅವರ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ. ಅವರ ಕುಟುಂಬದ ಸದಸ್ಯರು ಮತ್ತು ಅಭಿಮಾನಿಗಳ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ. ಶೋಕತಪ್ತ ಕುಟುಂಬಕ್ಕೆ ನನ್ನ ಸಂತಾಪಗಳು ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.