ADVERTISEMENT

ಸ್ವಾಮಿ ಹರ್ಷಾನಂದ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ

​ಪ್ರಜಾವಾಣಿ ವಾರ್ತೆ
Published 12 ಜನವರಿ 2021, 10:25 IST
Last Updated 12 ಜನವರಿ 2021, 10:25 IST

ಬೆಂಗಳೂರು: ಬೆಂಗಳೂರಿನ ರಾಮಕೃಷ್ಣ ಮಠದ ಅಧ್ಯಕ್ಷ ಸ್ವಾಮಿ ಹರ್ಷಾನಂದ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತ ಪಡಿಸಿದ್ದಾರೆ.

ರಾಮಕೃಷ್ಣ ಪರಮಹಂಸ ಹಾಗೂ ಸ್ವಾಮಿ ವಿವೇಕಾನಂದರ ತತ್ವಾದರ್ಶಗಳನ್ನು ಎತ್ತಿ ಹಿಡಿದ ವಿದ್ವಾಂಸರು ಅವರು. ಉತ್ತಮ ವಾಗ್ಮಿಗಳೂ ಆಗಿದ್ದರು ಎಂದು ಮುಖ್ಯಮಂತ್ರಿಗಳು ಸ್ಮರಿಸಿದ್ದಾರೆ.

ಭಗವಂತನು ಅವರಿಗೆ ಮೋಕ್ಷವನ್ನು ಕರುಣಿಸಲಿ. ಅವರ ಅನುಯಾಯಿಗಳಿಗೆ ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.