ADVERTISEMENT

ಉದ್ಧವ್ ಠಾಕ್ರೆ ಉದ್ಧಟತನ ಪ್ರದರ್ಶಿಸಿದ್ದಾರೆ: ಯಡಿಯೂರಪ್ಪ ಕಿಡಿ

​ಪ್ರಜಾವಾಣಿ ವಾರ್ತೆ
Published 18 ಜನವರಿ 2021, 5:58 IST
Last Updated 18 ಜನವರಿ 2021, 5:58 IST
   

ಬೆಂಗಳೂರು: ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಮರಾಠಿ ಭಾಷೆ ಮತ್ತು ಸಂಸ್ಕೃತಿ ಪ್ರಧಾನ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿಕೊಳ್ಳುವ ಮಾತನಾಡಿರುವುದು ಅವರ ಉದ್ಧಟತನದ ಪ್ರದರ್ಶನವಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಟ್ವಿಟ್ಟ್ರರ್‌ನಲ್ಲಿ ಕಿಡಿ ಕಾರಿದ್ದಾರೆ.

ref_src=twsrc%5Etfw">January 18, 2021

ಇದು ಭಾರತೀಯ ಒಕ್ಕೂಟ ತತ್ವದ ವಿರುದ್ಧವಾದ ನಿಲುವು. ಮಹಾಜನ್ ವರದಿಯೇ ಅಂತಿಮ ಎಂಬುದು ಎಲ್ಲರೂ ಬಲ್ಲ ಸತ್ಯ ಎಂದಿದ್ದಾರೆ.

ADVERTISEMENT

ಈ ಸೌಹಾರ್ದಯುತ ವಾತಾವರಣವನ್ನು ಕೆಡಿಸುವ ಪ್ರಯತ್ನ ಮಹಾರಾಷ್ಟ್ರದ ಮುಖ್ಯಮಂತ್ರಿಗಳಿಂದ ಆಗುತ್ತಿರುವುದು ನೋವಿನ ಸಂಗತಿ. ಒಬ್ಬ ಭಾರತೀಯನಾಗಿ ಉದ್ಧವ್ ಠಾಕ್ರೆ ಅವರು ಒಕ್ಕೂಟ ತತ್ವವನ್ನು ಗೌರವಿಸುವ ಬದ್ಧತೆಯನ್ನು ತೋರಲಿ' : ಮುಖ್ಯಮಂತ್ರಿ ಒತ್ತಾಯಿಸಿದ್ದಾರೆ.

ಇದೇವೇಳೆ, ಪ್ರಾದೇಶಿಕತೆ ಪ್ರದರ್ಶನ ಮತ್ತು ಭಾಷಾಂಧತೆಯ ಮಾತುಗಳು ದೇಶದ ಏಕತೆಗೆ ಮಾರಕವಾಗಿವೆ. ಇದನ್ನು ನಾನು ಖಂಡಿಸುತ್ತೇನೆ. ಕರ್ನಾಟಕದಲ್ಲಿ ಮರಾಠಿಗರು ಕನ್ನಡಿಗರೊಂದಿಗೆ ಬೆರೆತಿದ್ದಾರೆ, ಅದೇ ರೀತಿ ಮಹಾರಾಷ್ಟ್ರದ ಗಡಿ ಜಿಲ್ಲೆಗಳಲ್ಲಿರುವ ಕನ್ನಡಿಗರು ಮರಾಠಿಗರೊಂದಿಗೆ ಬೆರೆತಿದ್ದಾರೆ ಎಂದು ಹೇಳಿದ್ದಾರೆ.

‘ಕರ್ನಾಟಕ ಆಕ್ರಮಿತ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರ್ಪಡೆ ಮಾಡಿಕೊಳ್ಳುತ್ತೇವೆ’ ಎಂದು ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಭಾನುವಾರ ಹೇಳಿದ್ದರು.

’ಬಹುಸಂಖ್ಯೆಯಲ್ಲಿ ಮರಾಠಿ ಮಾತನಾಡುವ ಮತ್ತು ಸಂಸ್ಕೃತಿ ಹೊಂದಿರುವ ಪ್ರದೇಶಗಳನ್ನು ಮಹಾರಾಷ್ಟಕ್ಕೆ ಸೇರಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ಗಡಿ ವಿಷಯಕ್ಕಾಗಿ ಹೋರಾಟ ನಡೆಸಿ ಹುತಾತ್ಮರಾದವರಿಗೆ ಸಲ್ಲಿಸುವ ನಿಜವಾದ ಶ್ರದ್ಧಾಂಜಲಿ ಇದಾಗಿದೆ’ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಕಚೇರಿ ಟ್ವೀಟ್‌ ಮಾಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.