ADVERTISEMENT

ಹುಣಸೋಡು ಸ್ಫೋಟ ಪ್ರಕರಣ: ಉನ್ನತ ಮಟ್ಟದ ತನಿಖೆಗೆ ಆದೇಶಿಸಿದ ಯಡಿಯೂರಪ್ಪ

​ಪ್ರಜಾವಾಣಿ ವಾರ್ತೆ
Published 22 ಜನವರಿ 2021, 6:33 IST
Last Updated 22 ಜನವರಿ 2021, 6:33 IST
   

ಬೆಂಗಳೂರು: ಶಿವಮೊಗ್ಗದ ಹುಣಸೋಡು ಬಳಿ ನಿನ್ನೆ ರಾತ್ರಿ ಸಂಭವಿಸಿದಸ್ಫೋಟ ಪ್ರಕರಣವನ್ನು ಗಂಭೀರವಾಗಿಪರಿಗಣಿಸಿರುವ ಮುಖ್ಯಮಂತ್ರಿ ಯಡಿಯೂರಪ್ಪ ಉನ್ನತಮಟ್ಟದ ತನಿಖೆಗೆ ಆದೇಶಿಸಿರುವುದಾಗಿ ಟ್ವೀಟ್ ಮಾಡಿದ್ದಾರೆ.

ಈ ಭಾರೀ ಅನಾಹುತದಲ್ಲಿ ಅನೇಕ ಮಂದಿ ಸಾವನ್ನಪ್ಪಿದ್ದ ಸುದ್ದಿ ತೀವ್ರ ಆಘಾತಕಾರಿ ಹಾಗೂ ದುರದೃಷ್ಟಕರ. ಹಿರಿಯ ಅಧಿಕಾರಿಗಳೊಂದಿಗೆ ನಿನ್ನೆ ತಡರಾತ್ರಿಯಿಂದಲೇ ಸಂಪರ್ಕದಲ್ಲಿದ್ದು, ಅಗತ್ಯ ರಕ್ಷಣಾ ಕಾರ್ಯಾಚರಣೆಗೆ ತಂಡಗಳನ್ನು ಈಗಾಗಲೇ ರವಾನಿಸಲಾಗಿದೆ. ಎಂದು ತಿಳಿಸಿದ್ದಾರೆ.

ಮೃತರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತಾ, ಅವರ ಕುಟುಂಬದವರಲ್ಲಿ ತೀವ್ರ ಸಂತಾಪಗಳನ್ನು ವ್ಯಕ್ತಪಡಿಸುತ್ತೇನೆ. ಗಾಯಗೊಂಡವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಅವರೆಲ್ಲರೂ ಶೀಘ್ರದಲ್ಲೇ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ. ಈ ದುರ್ಘಟನೆಯ ಉನ್ನತ ಮಟ್ಟದ ತನಿಖೆಗೆ ಆದೇಶಿಸಲಾಗಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ನಿಶ್ಚಿತ ಎಂದು ಟ್ವೀಟ್ ಮಾಡಿದ್ದಾರೆ.

ADVERTISEMENT

ಶಿವಮೊಗ್ಗದ ಅಬ್ಬಲಗೆರೆ–ಹುಣಸೋಡು ಮಧ್ಯೆ ಇರುವ ಜಲ್ಲಿ ಕ್ರಷರ್‌ ಬಳಿ ಸಂಗ್ರಹಿಸಿಟ್ಟಿದ್ದ ಭಾರಿ ಪ್ರಮಾಣದ ಸ್ಫೋಟಕ ಗುರುವಾರ ರಾತ್ರಿ ಸ್ಫೋಟಿಸಿ, ಬಿಹಾರ ಮೂಲದ ಸುಮಾರು 15 ಕಾರ್ಮಿಕರು ಮೃತಪಟ್ಟಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.