ADVERTISEMENT

ಚಿಕ್ಕಬಳ್ಳಾಪುರ: ಕೋವಿಡ್ ಸೋಂಕಿತರ ಸಂಖ್ಯೆ 21ಕ್ಕೆ ಏರಿಕೆ

​ಪ್ರಜಾವಾಣಿ ವಾರ್ತೆ
Published 4 ಮೇ 2020, 8:40 IST
Last Updated 4 ಮೇ 2020, 8:40 IST
ಕೊರೊನಾ ವೈರಸ್
ಕೊರೊನಾ ವೈರಸ್   

ಚಿಕ್ಕಬಳ್ಳಾಪುರ: ನಗರದ 17ನೇ ವಾರ್ಡ್‌ ನ 30ವರ್ಷದ ವ್ಯಕ್ತಿಯೊಬ್ಬರಿಗೆ ಕೋವಿಡ್ 19 ತಗುಲಿರುವುದು ಸೋಮವಾರ ದೃಢಪಟ್ಟಿದ್ದು, ಇದರಿಂದ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 21ಕ್ಕೆ ಏರಿಕೆಯಾಗಿದೆ.

ನಗರದಲ್ಲಿ ಕೋವಿಡ್ ಗೆ ತುತ್ತಾಗಿದ್ದ 17ನೇ ವಾರ್ಡ್ ವ್ಯಾಪ್ತಿಯ ಅಂಜುಮನ್ ರಸ್ತೆಯ ನಿವಾಸಿ, 69 ವರ್ಷದ ವ್ಯಕ್ತಿಯೊಬ್ಬರು ಏಪ್ರಿಲ್ 15ರಂದು ಮೃತಪಟ್ಟಿದ್ದರು. ಅವರ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕದಲ್ಲಿ ಈವರೆಗೆ 17ನೇ ವಾರ್ಡ್‌ನ ಆರು ಜನರಿಗೆ ಸೋಂಕು ತಗುಲಿತ್ತು.

ಇದೀಗ ತೃತೀಯ ಹಂತದಲ್ಲಿ ಸೋಂಕಿತ ವ್ಯಕ್ತಿಯೊಬ್ಬನಿಂದ ಅವರ ಅಳಿಯನಿಗೂ ಸೋಂಕು ತಗುಲಿರುವುದು ಜಿಲ್ಲಾ ಕೇಂದ್ರದಲ್ಲಿ‌ ತಲ್ಲಣ ಮೂಡಿಸಿದೆ. ಈ‌ ನಡುವೆಯೇ ಏಪ್ರಿಲ್ 25 ರಂದು ನಗರದ 20 ನೇ ವಾರ್ಡ್ ನಿವಾಸಿ 18 ವರ್ಷದ ಯುವಕನೊಬ್ಬನಿಗೆ ಕೋವಿಡ್ ತಗಲಿರುವುದು ಪತ್ತೆಯಾಗಿತ್ತು.

ADVERTISEMENT

ಜಿಲ್ಲೆಯಲ್ಲಿ ಈವರೆಗೆ ಗೌರಿಬಿದನೂರಿನ 12, ಚಿಕ್ಕಬಳ್ಳಾಪುರದ 9 ಜನರು ಸೇರಿದಂತೆ 21 ಮಂದಿಯಲ್ಲಿ ಕೋವಿಡ್‌ ಪತ್ತೆಯಾಗಿದೆ.
ಈ ಪೈಕಿ ಇಬ್ಬರು (ಗೌರಿಬಿದನೂರು, ಚಿಕ್ಕಬಳ್ಳಾಪುರದ ತಲಾ ಒಬ್ಬರು) ಮೃತಪಟ್ಟಿದ್ದಾರೆ. ಉಳಿದಂತೆ ಗೌರಿಬಿದನೂರಿನ 11 ಸೋಂಕಿತರು ಚಿಕಿತ್ಸೆಯಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.

ಸದ್ಯ ಜಿಲ್ಲಾ ಆಸ್ಪತ್ರೆಯ ಕೋವಿಡ್‌ ವಾರ್ಡ್‌ನಲ್ಲಿ ಐದು ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ನಗರದಲ್ಲಿ ಕೋವಿಡ್ ನಿಯಂತ್ರಿಸಲು ಜಿಲ್ಲಾಡಳಿತ ಇಡೀ ನಗರದಾದ್ಯಂತ ಸೀಲ್‌ಡೌನ್ ಜಾರಿಗೊಳಿಸಿದ್ದು. ನಗರದ ಪ್ರತಿ ವಾರ್ಡ್‌ಗೆ ತಲಾ ಒಬ್ಬ ನೋಡಲ್ ಅಧಿಕಾರಿ, ಸ್ವಯಂ ಸೇವಕರನ್ನು ನಿಯೋಜಿಸಿ ಪರಿಸ್ಥಿತಿ ತಹಬದಿಗೆ ತರಲು ಪ್ರಯತ್ನಿಸುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.