ಸಾಂದರ್ಭಿಕ ಚಿತ್ರ
ಮಂಡ್ಯ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಅಪರಾಧಿ ಪಾಂಡವಪುರ ಪಟ್ಟಣದ ನಯಾಜ್ ಪಾಷ (21) ಎಂಬಾತನಿಗೆ 2ನೇ ತ್ವರಿತಗತಿ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಬಿ.ದಿಲೀಪ್ ಕುಮಾರ್ ಅವರು 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು ₹1.50 ಲಕ್ಷ ದಂಡಿ ವಿಧಿಸಿ ಆದೇಶಿಸಿದ್ದಾರೆ.
ಬಾಲಕಿಯನ್ನು ಪುಸಲಾಯಿಸಿ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿರುವ ಬಗ್ಗೆ ಪಾಂಡವಪುರ ಠಾಣೆಯಲ್ಲಿ 2024ರ ಮೇ ತಿಂಗಳಲ್ಲಿ ಎಫ್‌ಐಆರ್ ದಾಖಲಾಗಿತ್ತು. ಅಂದಿನ ಇನ್‌ಸ್ಟೆಕ್ಟರ್ ವಿವೇಕಾನಂದ ಅವರು ತನಿಖೆ ನಡೆಸಿ, ಸೂಕ್ತ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ, ನ್ಯಾಯಾಲಯಕ್ಕೆ ದೋಷಾರೋಪಣಪಟ್ಟಿ ಸಲ್ಲಿಸಿದ್ದರು.
ಪಾಂಡವಪುರ ಪೊಲೀಸ್ ಠಾಣೆಯ ಮಹಿಳಾ ಪೊಲೀಸ್ ಕಾನ್‌ಸ್ಟೆಬಲ್ ಶ್ರುತಿ ಅವರು ಪ್ರಕರಣದ ಸಾಕ್ಷಿದಾರರನ್ನು ಸಕಾಲಕ್ಕೆ ನ್ಯಾಯಾಲಯಕ್ಕೆ ಹಾಜರುಪಡಿಸಿ ಸಾಕ್ಷಿ ನುಡಿಯಲು ಸಹಕರಿಸಿದ್ದರು. ಅಭಿಯೋಜನೆಯ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಹೆಬ್ಬಕವಾಡಿ ನಾಗರಾಜು ವಾದ ಮಂಡಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.