ADVERTISEMENT

ಶಾಲೆ ಬಿಟ್ಟ ಮಕ್ಕಳು: ಮನೆ–ಮನೆ ಸಮೀಕ್ಷೆಗೆ ಹೈಕೊರ್ಟ್‌ ನಿರ್ದೇಶನ

​ಪ್ರಜಾವಾಣಿ ವಾರ್ತೆ
Published 28 ಜುಲೈ 2021, 19:48 IST
Last Updated 28 ಜುಲೈ 2021, 19:48 IST
ಹೈಕೋರ್ಟ್
ಹೈಕೋರ್ಟ್   

ಬೆಂಗಳೂರು: ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಪ್ರತಿಯೊಂದು ಮನೆಯ ಬಾಗಿಲಿಗೂ ತೆರಳಿ ಸಮೀಕ್ಷೆ ನಡೆಸಬೇಕು ಎಂದು ಪಾಲಿಕೆಗೆ ಹೈಕೊರ್ಟ್‌ ನಿರ್ದೇಶನ ನೀಡಿದೆ.

ಈ ಕುರಿತ ಸ್ವಯಂ ಪ್ರೇರಿತ ಅರ್ಜಿ ವಿಚಾರಣೆ ನಡೆಸುತ್ತಿರುವ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠಕ್ಕೆ ಹಿರಿಯ ವಕೀಲ ಕೆ.ಎನ್. ಫಣೀಂದ್ರ ವರದಿ ಸಲ್ಲಿಸಿದ್ದು, ಸರ್ವೆ ಆರಂಭಿಸಲು ಬಿಬಿಎಂಪಿಗೆ ನಿರ್ದೇಶನ ನೀಡಲು ಕೋರಿದರು.

ಜೂನ್‌ ವೇಳೆಗೆ ಗ್ರಾಮೀಣ ಪ್ರದೇಶದಲ್ಲಿ ಶೇ 91ರಷ್ಟು, ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಶೇ 79ರಷ್ಟು ಕುಟುಂಬಗಳ ಸಮೀಕ್ಷೆ ನಡೆಸಲಾಗಿತ್ತು. ನಗರ ಪ್ರದೇಶದ 6ರಿಂದ 18 ವರ್ಷದೊಳಗಿನ ವಯಸ್ಸಿನ 12.28 ಲಕ್ಷ ಮಕ್ಕಳಲ್ಲಿ 8,718 ಮಕ್ಕಳು ಶಾಲೆಗೆ ಹೋಗುತ್ತಿಲ್ಲ ಮತ್ತು 4,842 ಮಕ್ಕಳು ಶಾಲೆಗೆ ದಾಖಲಾಗಿಯೇ ಇಲ್ಲ. ಗ್ರಾಮೀಣ ಪ್ರದೇಶದಲ್ಲಿ 33,344 ಮಕ್ಕಳು ಶಾಲೆಗೆ ಹೋಗುತ್ತಿಲ್ಲ. 9,716 ಮಕ್ಕಳು ಶಾಲೆಗೆ ದಾಖಲಾಗಿಯೇ ಇಲ್ಲ ಎಂದು ಅವರು ವರದಿಯಲ್ಲಿ ತಿಳಿಸಿದ್ದಾರೆ.

ADVERTISEMENT

ಗ್ರಾಮೀಣ ಪ್ರದೇಶದ ಮಾದರಿಯಲ್ಲೇ ಬಿಬಿಎಂಪಿ ವ್ಯಾಪ್ತಿಯಲ್ಲೂ ಸರ್ವೆ ನಡೆಯಬೇಕು ಎಂದು ಪೀಠ ನಿರ್ದೇಶನ ನೀಡಿತು. ವಿಚಾರಣೆಯನ್ನು ಆ.24ಕ್ಕೆ ಮುಂದೂಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.