ADVERTISEMENT

ಮಕ್ಕಳ ಸೆರೋ ಸಮೀಕ್ಷೆ ಪೂರ್ಣ

​ಪ್ರಜಾವಾಣಿ ವಾರ್ತೆ
Published 16 ಜೂನ್ 2022, 15:59 IST
Last Updated 16 ಜೂನ್ 2022, 15:59 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು:ಮಕ್ಕಳ ಮೇಲೆ ಕೊರೊನಾ ಸೋಂಕಿನ ತೀವ್ರತೆ ಹಾಗೂ ಪರಿಣಾಮದ ಬಗ್ಗೆ ತಿಳಿಯಲು ಆರೋಗ್ಯ ಇಲಾಖೆ ಹಮ್ಮಿಕೊಂಡಿದ್ದ ಸೆರೋ ಸಮೀಕ್ಷೆ ಪೂರ್ಣಗೊಂಡಿದೆ. ಈ ಸಮೀಕ್ಷೆಗೆ6 ರಿಂದ 14 ವರ್ಷದ 5,360 ಮಕ್ಕಳ ಗಂಟಲ ದ್ರವದ ಮಾದರಿಗಳನ್ನು ಸಂಗ್ರಹಿಸಲಾಗಿದೆ.

ಸಮುದಾಯ ಮಟ್ಟದಲ್ಲಿ ರೋಗನಿರೋಧಕ ಶಕ್ತಿ ಗುರುತಿಸುವುದು ಸಮೀಕ್ಷೆಯ ಮುಖ್ಯ ಉದ್ದೇಶ. ಆರೋಗ್ಯ ಇಲಾಖೆಯು 5,072 ಮಂದಿಯನ್ನು ಸಮೀಕ್ಷೆಗೆ ಒಳಪಡಿಸುವ ಗುರಿ ಹಾಕಿಕೊಂಡಿತ್ತು. ಶೇ 106 ರಷ್ಟು ಗುರಿ ಸಾಧಿಸಲಾಗಿದೆ.

ರಾಜ್ಯದ ಎಲ್ಲ ಜಿಲ್ಲೆಗಳ ಮಕ್ಕಳನ್ನೂ ಸಮೀಕ್ಷೆಗೆ ಒಳಪಡಿಸಲಾಗಿದೆ.ಬಿಬಿಎಂ‍ಪಿ ವ್ಯಾಪ್ತಿಯಲ್ಲಿ ಗರಿಷ್ಠ (759) ಮಕ್ಕಳು ಹಾಗೂ ಕೊಡಗಿನಲ್ಲಿ ಕನಿಷ್ಠ (40) ಮಕ್ಕಳನ್ನು ಆಯ್ಕೆ ಮಾಡಿಕೊಳ್ಳಲಾಗಿದೆ.

ADVERTISEMENT

‘ಮಕ್ಕಳ ಮೇಲೆ ನಡೆಸಲಾದ ಸೆರೋ ಸಮೀಕ್ಷೆ ಪೂರ್ಣಗೊಂಡಿದೆ. ಕೊರೊನಾ ಸೋಂಕು ತಗುಲದಂತೆ ಮುಖಗವಸು ಧರಿಸುವಿಕೆ ಸೇರಿದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಬೇಕು. ಪಾಲಕರು ಮಕ್ಕಳಿಗೆ ಸುರಕ್ಷತಾ ಕ್ರಮಗಳ ಬಗ್ಗೆ ಜಾಗೃತಿ ಮೂಡಿಸಬೇಕು’ ಎಂದು ಆರೋಗ್ಯ ಇಲಾಖೆ ಆಯುಕ್ತ ಡಿ. ರಂದೀಪ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.