ADVERTISEMENT

ಚಿನ್ನಸ್ವಾಮಿ ಕ್ರೀಡಾಂಗಣ ಕಾಲ್ತುಳಿತ ಪ್ರಕರಣ: ಎರಡು ಸಂಪುಟಗಳ ವರದಿ ಸಲ್ಲಿಕೆ

​ಪ್ರಜಾವಾಣಿ ವಾರ್ತೆ
Published 11 ಜುಲೈ 2025, 23:30 IST
Last Updated 11 ಜುಲೈ 2025, 23:30 IST
<div class="paragraphs"><p>ಜೂನ್ 4ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಿಕ್ಕಿರಿದು ಸೇರಿದ್ದ ಆರ್‌ಸಿಬಿ ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟಿದ್ದರು</p></div><div class="paragraphs"><p>&nbsp;</p></div>

ಜೂನ್ 4ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಿಕ್ಕಿರಿದು ಸೇರಿದ್ದ ಆರ್‌ಸಿಬಿ ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟಿದ್ದರು

 

   

ಪ್ರಜಾವಾಣಿ ಚಿತ್ರ: ಪುಷ್ಕರ್‌ ವಿ

ADVERTISEMENT

ಬೆಂಗಳೂರು: ಆರ್‌ಸಿಬಿ ಗೆಲುವಿನ ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತದ ಘಟನೆಯ ತನಿಖೆಗೆ ರಚಿಸಿದ್ದ ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಜಾನ್ ಮೈಕೆಲ್‌ ಕುನ್ಹ ಆಯೋಗ ಎರಡು ಸಂಪುಟಗಳನ್ನು ಒಳಗೊಂಡ ವರದಿಯನ್ನು ಶುಕ್ರವಾರ ಮುಖ್ಯಮಂತ್ರಿಗೆ ಸಲ್ಲಿಸಿತು.

ವರದಿ ಸ್ವೀಕರಿಸಿದ ನಂತರ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಆಯೋಗ ನೀಡಿದ ವರದಿಯನ್ನು ಜುಲೈ 17ರಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಲಾಗುವುದು ಚರ್ಚಿಸಿದ ನಂತರ ಸೂಕ್ತ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದರು.

ವರದಿಯನ್ನು ವಿವರವಾಗಿ ಓದಿಲ್ಲ. ನ್ಯಾಯಮೂರ್ತಿಗಳು ಮಾಡಿರುವ ಶಿಫಾರಸುಗಳ ಬಗ್ಗೆ ಚರ್ಚಿಸಿದ ನಂತರ ಸಂಪುಟವೇ ಅಂತಿಮ ನಿರ್ಧಾರ ಮಾಡಲಿದೆ ಎಂದರು.  

ಆರ್‌ಸಿಬಿ ವಿಜಯೋತ್ಸವದ ವೇಳೆ ಕಾಲ್ತುಳಿತದಿಂದ 11 ಜನರು ಮೃತಪಟ್ಟ ದಾರುಣ ಘಟನೆ ನಡೆದ ಬೆನ್ನಲ್ಲೇ, ಮಾಜಿಸ್ಟ್ರೀಯಲ್ ವಿಚಾರಣೆಗೆ ಆದೇಶಿಸಲಾಗಿತ್ತು. ನಗರ ಪೊಲೀಸ್‌ ಕಮಿಷನರ್‌ ಬಿ. ದಯಾನಂದ್‌ ಸೇರಿದಂತೆ ಹಲವು ಪೊಲೀಸ್‌ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಅಮಾನತು ಮಾಡಿತ್ತು. ಪೂರ್ವ ತಯಾರಿ ಇಲ್ಲದೇ ಕಾರ್ಯಕ್ರಮ ಹಮ್ಮಿಕೊಂಡಿದ್ದೇ ಈ ಅನಾಹುತಕ್ಕೆ ಕಾರಣ ಎಂದು ವಿರೋಧ ಪಕ್ಷಗಳು ದೂರಿದ್ದವು. ನಂತರ ನ್ಯಾಯಮೂರ್ತಿ ಜಾನ್ ಮೈಕೆಲ್‌ ಕುನ್ಹ ಆಯೋಗ ರಚಿಸಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.