
ಡಿ.ಕೆ.ಶಿವಕುಮಾರ್
ಬೆಂಗಳೂರು: ‘ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಿಂದ ಮುಂಬರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಪಂದ್ಯಗಳನ್ನು ಸ್ಥಳಾಂತರ ಮಾಡುವುದಕ್ಕೆ ಬಿಡುವುದಿಲ್ಲ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಕೆಎಸ್‌ಸಿಎ ಚುನಾವಣೆಯಲ್ಲಿ ಮತದಾನ ಮಾಡಿದ ಬಳಿಕ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದ್ದಾರೆ.
‘ಇದು ಕರ್ನಾಟಕ ರಾಜ್ಯ ಹಾಗೂ ಬೆಂಗಳೂರಿನ ಗೌರವದ ವಿಚಾರ. ಮುಂದಿನ ಐಪಿಎಲ್ ಪಂದ್ಯಗಳನ್ನು ಇಲ್ಲೇ ನಡೆಸುವಂತೆ ಕ್ರಮ ಕೈಗೊಳ್ಳುತ್ತೇವೆ. ನಾನು ಕ್ರಿಕೆಟ್ ಅಭಿಮಾನಿ. ಕಾನೂನು ಚೌಕಟ್ಟಿನಲ್ಲಿ ಜನದಟ್ಟಣೆ ನಿಭಾಯಿಸಿಕೊಂಡು ಕ್ರೀಡಾಂಗಣ ಬೆಳೆಸಲಾಗುವುದು. ಇದರ ಜೊತೆಗೆ ಪರ್ಯಾಯವಾಗಿ ದೊಡ್ಡ ಕ್ರೀಡಾಂಗಣವನ್ನು ನಿರ್ಮಾಣ ಮಾಡುತ್ತೇವೆ’ ಎಂದು ಹೇಳಿದ್ದಾರೆ.
2025ರ ಜೂನ್ 4ರಂದು ಐಪಿಎಲ್ ಪ್ರಶಸ್ತಿ ಜಯಿಸಿದ್ದ ಆರ್‌ಸಿಬಿಯ ವಿಜಯೋತ್ಸವದ ಸಂದರ್ಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ಸಂಭವಿಸಿ 11 ಜನಸಾವಿಗೀಡಾಗಿದ್ದರು. ಹಲವರು ಗಾಯಗೊಂಡಿದ್ದರು. ಘಟನೆ ಬೆನ್ನಲ್ಲೇ ಬೆಂಗಳೂರಲ್ಲಿ ಮುಂಬರುವ ಐಪಿಎಲ್ ಪಂದ್ಯಗಳ ಆಯೋಜಿಸುವ ಬಗ್ಗೆ ಅನುಮಾನಗಳು ವ್ಯಕ್ತವಾದ ಬೆನ್ನಲ್ಲೇ ಡಿಕೆಶಿ ಹೇಳಿಕೆ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.