ADVERTISEMENT

ಚಿತ್ರದುರ್ಗದ ಬಿಜೆಪಿ ಶಾಸಕ ತಿಪ್ಪಾರೆಡ್ಡಿ ಹನಿಟ್ರ್ಯಾಪ್‌ಗೆ ಯತ್ನ: ದೂರು ದಾಖಲು

​ಪ್ರಜಾವಾಣಿ ವಾರ್ತೆ
Published 2 ನವೆಂಬರ್ 2022, 5:18 IST
Last Updated 2 ನವೆಂಬರ್ 2022, 5:18 IST
ಶಾಸಕ ತಿಪ್ಪಾರೆಡ್ಡಿ
ಶಾಸಕ ತಿಪ್ಪಾರೆಡ್ಡಿ    

ಚಿತ್ರದುರ್ಗ: ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಅವರನ್ನು ಹನಿಟ್ರ್ಯಾಪ್ ಮಾಡಲು ಯತ್ನಿಸಿದ ಪ್ರಕರಣ ಬೆಳಕಿಗೆ ಬಂದಿದ್ದು, ಸೈಬರ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಶಾಸಕರ ಮೊಬೈಲ್ ಫೋನ್ ಗೆ ವಿಡಿಯೊ ಕರೆ ಮಾಡಿದ ಯುವತಿ ವಿವಸ್ತ್ರಗೊಂಡು ಅಶ್ಲೀಲವಾಗಿ ಮಾತನಾಡಿದ್ದಾರೆ. ಇದರಿಂದ ಅನುಮಾನಗೊಂಡ ಶಾಸಕರು ಕರೆ ಸ್ಥಗಿತಗೊಳಿಸಿದ್ದಾರೆ.

'ಯುವತಿ ಮೂರು ಬಾರಿ ವಿಡಿಯೊ ಕರೆ ಮಾಡಿದ್ದರು. ಕರೆ ಸ್ಥಗಿತಗೊಳಿಸಿ ಫೋನ್ ನಂಬರ್ ಬ್ಲ್ಯಾಕ್ ಮಾಡಿದ್ದೇನೆ. ಪೊಲೀಸ್ ಠಾಣೆಗೆ ದೂರು ನೀಡಿದ್ದೇನೆ' ಎಂದು ಶಾಸಕ ತಿಪ್ಪಾರೆಡ್ಡಿ ಮಾದ್ಯಮ ಪ್ರತಿನಿಧಿಗಳಿಗೆ ಮಾಹಿತಿ ನೀಡಿದ್ದಾರೆ.

ADVERTISEMENT

ಐಟಿ ಕಾಯ್ದೆಯ 66 (ಎ) ಅಡಿಯಲ್ಲಿ‌ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ರಾಜಸ್ಥಾನ ಅಥವಾ ಓಡಿಸಾ ರಾಜ್ಯದಿಂದ ವಿಡಿಯೊ ಬಂದಿರುವ ಅನುಮಾನ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.