ADVERTISEMENT

ಹೆದ್ದಾರಿ ಕಾಮಗಾರಿಗೆ ವೇಗ: ಕಾರಜೋಳ ಆಗ್ರಹ

​ಪ್ರಜಾವಾಣಿ ವಾರ್ತೆ
Published 3 ಏಪ್ರಿಲ್ 2025, 15:15 IST
Last Updated 3 ಏಪ್ರಿಲ್ 2025, 15:15 IST
ಗೋವಿಂದ ಕಾರಜೋಳ
ಗೋವಿಂದ ಕಾರಜೋಳ   

ನವದೆಹಲಿ: ‘ಚಿತ್ರದುರ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೆಲವೊಂದು ಹೆದ್ದಾರಿ ಕಾಮಗಾರಿಗಳು ನಿಧಾನಗತಿಯಲ್ಲಿ ಸಾಗುತ್ತಿವೆ. ಈ ಕಾಮಗಾರಿಗಳನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸಬೇಕು’ ಎಂದು ಸಂಸದ ಗೋವಿಂದ ಕಾರಜೋಳ ಆಗ್ರಹಿಸಿದರು. 

ಲೋಕಸಭೆಯಲ್ಲಿ ಗುರುವಾರ ಪ್ರಶ್ನೋತ್ತರ ಅವಧಿಯಲ್ಲಿ ಕಾರಜೋಳ ಪ್ರಶ್ನೆಗೆ ಉತ್ತರಿಸಿದ ಹೆದ್ದಾರಿ ಸಚಿವ ನಿತಿನ್ ಗಡ್ಕರಿ, ‘ಚಿತ್ರದುರ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಏಳು ಹೆದ್ದಾರಿ ಯೋಜನೆಗಳು ಪ್ರಗತಿಯಲ್ಲಿವೆ’ ಎಂದರು. 

‘₹1,167 ಕೋಟಿ ವೆಚ್ಚದಲ್ಲಿ ಚಳ್ಳಕೆರೆ-ಹಿರಿಯೂರು ಹೆದ್ದಾರಿಯನ್ನು ನಾಲ್ಕು ಪಥದ ಹೆದ್ದಾರಿಯನ್ನಾಗಿ ಪರಿವರ್ತಿಸುವ ಕೆಲಸ ಶೇ 95ರಷ್ಟು ಪೂರ್ಣಗೊಂಡಿದೆ. ₹109 ಕೋಟಿ ವೆಚ್ಚದ ಹೊಸದುರ್ಗ-ಹೊಳಲ್ಕೆರೆ ದ್ವಿಪಥ ಹೆದ್ದಾರಿ ಕಾಮಗಾರಿ ಶೇ 92ರಷ್ಟು ಮುಗಿದಿದೆ. ಕಡೂರು-ಹೊಸದುರ್ಗ ದ್ವಿಪಥ ಹೆದ್ದಾರಿ ಕಾಮಗಾರಿ ಶೇ 13ರಷ್ಟು ಮುಗಿದಿದೆ. ಚಿತ್ರದುರ್ಗ– ಶಿವಮೊಗ್ಗ ನಡುವಿನ ₹518 ಕೋಟಿಯ ಕಾಮಗಾರಿ ಶೇ 75ರಷ್ಟು ಆಗಿದೆ. ಶಿರಾ ಪಟ್ಟಣದ ಹತ್ತಿರ ಬೈಪಾಸ್ ರಸ್ತೆ ನಿರ್ಮಾಣಕ್ಕೆ ₹584 ಕೋಟಿ ಅನುದಾನ ಮಂಜೂರು ಮಾಡಲಾಗಿದ್ದು, ಟೆಂಡರ್ ಹಂತದಲ್ಲಿದೆ’ ಎಂದು ಸಚಿವರು ತಿಳಿಸಿದರು. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.