ADVERTISEMENT

ಚಿತ್ರದುರ್ಗ ಮಠದ ಮಾಜಿ ಆಡಳಿತಾಧಿಕಾರಿಗೆ ನ್ಯಾಯಾಂಗ ಬಂಧನ

​ಪ್ರಜಾವಾಣಿ ವಾರ್ತೆ
Published 14 ನವೆಂಬರ್ 2022, 8:26 IST
Last Updated 14 ನವೆಂಬರ್ 2022, 8:26 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಚಿತ್ರದುರ್ಗ: ಮುರುಘಾ ಮಠದ ಶಿವಮೂರ್ತಿ ಶರಣರ ವಿರುದ್ಧ ಸುಳ್ಳು ಹೇಳಿಕೆ ನೀಡುವಂತೆ ಪೋಕ್ಸೊ ಸಂತ್ರಸ್ತ ವಿದ್ಯಾರ್ಥಿನಿಯರಿಗೆ ಕುಮ್ಮಕ್ಕು ನೀಡಿದ ಆರೋಪದಡಿ ಬಂಧಿತರಾಗಿರುವ ಮಠದ ಮಾಜಿ ಆಡಳಿತಾಧಿಕಾರಿ ಎಸ್.ಕೆ.ಬಸವರಾಜನ್ ಹಾಗೂ ಶಿಕ್ಷಕ ಬಸವರಾಜೇಂದ್ರ ಅವರಿಗೆ ಜಿಲ್ಲಾ ನ್ಯಾಯಾಲಯ ನ.28ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಪೊಲೀಸ್ ಕಸ್ಟಡಿ ಅವಧಿ ಮುಗಿದ ಪರಿಣಾಮ ತನಿಖಾ ತಂಡ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಸೋಮವಾರ ಹಾಜರುಪಡಿಸಿತು. ಪೊಲೀಸ್ ವಿಚಾರಣೆ ಪೂರ್ಣಗೊಂಡಿದ್ದರಿಂದ ಇಬ್ಬರು ಆರೋಪಿಗಳನ್ನು ನ್ಯಾಯಾಯಲ 14 ದಿನ ನ್ಯಾಯಾಂಗ ಬಂದನಕ್ಕೆ ಆದೇಶಿಸಿತು.

ಜಿಲ್ಲಾ ಕಾರಾಗೃಹದಲ್ಲಿ ಶಿವಮೂರ್ತಿ ಶರಣರು ಇರುವ ಕಾರಣಕ್ಕೆ ತಮ್ಮ ಕಕ್ಷಿದಾರರಿಗೆ ದಾವಣಗೆರೆ ಜಿಲ್ಲಾ ಕಾರಾಗೃಹ ನೀಡುವಂತೆ ಬಸವರಾಜನ್ ಪರ ವಕೀಲರು ಕೋರಿಕೊಂಡರು. ಈ ಕೋರಿಕೆಯನ್ನು ನ್ಯಾಯಾಲಯ ತಿರಸ್ಕರಿಸಿತು. ಪೋಕ್ಸೊ ಪ್ರಕರಣದಲ್ಲಿ ಬಂಧಿತರಾಗಿರುವ ಶಿವಮೂರ್ತಿ ಶರಣರು, ಮಠದ ವ್ಯವಸ್ಥಾಪಕರಾಗಿದ್ದ ಪರಮಶಿವಯ್ಯ ಹಾಗೂ ಮಠದ ಮಾಜಿ ಆಡಳಿತಾಧಿಕಾರಿ ಬಸವರಾಜನ್ ಈಗ ಒಂದೇ ಜೈಲು ಸೇರಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.