ADVERTISEMENT

ಚಿತ್ರದುರ್ಗ ಕ್ಷೇತ್ರದಲ್ಲಿ ಮೂವರು ನಾರಾಯಣಸ್ವಾಮಿ

​ಪ್ರಜಾವಾಣಿ ವಾರ್ತೆ
Published 3 ಮೇ 2019, 16:54 IST
Last Updated 3 ಮೇ 2019, 16:54 IST

ಚಿತ್ರದುರ್ಗ: ಬಿಜೆಪಿ ಅಭ್ಯರ್ಥಿ ಎ.ನಾರಾಯಣಸ್ವಾಮಿ ಸೇರಿ ಒಂದೇ ಹೆಸರಿನ ಮೂವರು ಅಭ್ಯರ್ಥಿಗಳು ಉಮೇದುವಾರಿಕೆ ಸಲ್ಲಿಸಿದ್ದಾರೆ. ಮತದಾರರಲ್ಲಿ ಗೊಂದಲ ಸೃಷ್ಟಿಸುವ ಈ ತಂತ್ರ ಹೇಗೆ ಫಲನೀಡಲಿದೆ ಎಂಬುದು ಫಲಿತಾಂಶದ ಬಳಿಕ ಗೊತ್ತಾಗಲಿದೆ.

ಮಂಗಳವಾರ ನಾರಾಯಣಸ್ವಾಮಿ ಎಂಬ ಹೆಸರಿನ ಮತ್ತಿಬ್ಬರು ಪಕ್ಷೇತರ ಅಭ್ಯರ್ಥಿಗಳಾಗಿ ಕಣಕ್ಕೆ ಇಳಿದಿದ್ದಾರೆ. ಚಿತ್ರದುರ್ಗದ ಸಿ.ಎಚ್. ನಾರಾಯಣಸ್ವಾಮಿ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲ್ಲೂಕು ದ್ಯಾವರಹಳ್ಳಿಯ ಡಿ.ಸಿ. ನಾರಾಯಣಸ್ವಾಮಿ ಉಮೇದುವಾರಿಕೆ ಸಲ್ಲಿಸಿದವರು. ಡಿ.ಸಿ. ನಾರಾಯಣಸ್ವಾಮಿ ಈ ಹಿಂದೆ ವಿಧಾನಸಭಾ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗೆ ಸ್ಪರ್ಧಿಸಿದ ಅನುಭವ ಹೊಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT