
ಚಿತ್ರದುರ್ಗ ಬಸ್ ಅಪಘಾತ
ಚಿತ್ರದುರ್ಗ: ಹಿರಿಯೂರು ಸಮೀಪ ಜವನಗೊಂಡನಹಳ್ಳಿಯ ಗೊರ್ಲತ್ತು ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ–48ರಲ್ಲಿ ಕಂಟೈನರ್ ಹಾಗೂ ನಾನ್-ಎಸಿ ಸ್ಲೀಪರ್ ಬಸ್ ನಡುವೆ ಗುರುವಾರ ನಸುಕಿನಲ್ಲಿ ಡಿಕ್ಕಿಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಬಸ್‌ನಲ್ಲಿದ್ದ ಹಲವರು ಸಜೀವವಾಗಿ ದಹನಗೊಂಡಿದ್ದಾರೆ.
ಒಂಬತ್ತು ಮಂದಿ ಸಾವಿಗೀಡಾಗಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಪೂರ್ವ ವಲಯ ಐಜಿ ರವಿಕಾಂತೇಗೌಡ ಸ್ಪಷ್ಟನೆ ನೀಡಿದ್ದಾರೆ.
ಚಿತ್ರದುರ್ಗ ಬಸ್ ಅಪಘಾತ
ಸೀಬರ್ಡ್ ಕಂಪನಿಯ ಎಸಿ ಬಸ್ ಬೆಂಗಳೂರಿನಿಂದ ಗೋಕರ್ಣಕ್ಕೆ ಹೊರಟಿತ್ತು. ಬೆಂಗಳೂರು ಕಡೆಗೆ ಹೊರಟಿದ್ದ ಕಂಟೈನರ್ ಡಿವೈಡರ್ ಗೆ ಡಿಕ್ಕಿಯಾಗಿ ಎದುರಿನಿಂದ ಬರುತ್ತಿದ್ದ ಬಸ್ ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೆಂಕಿ ಹೊತ್ತಿಕೊಂಡಿದೆ.
ಕಂಟೈನರ್ ಚಾಲಕನ ಅಜಾಗರೂಕತೆಯಿಂದ ಅಪಘಾತ ನಡೆದಿದೆ ಎನ್ನಲಾಗಿದ್ದು, ನಿದ್ದೆ ಮಂಪರಿನಲ್ಲಿ ಅಪಘಾತ ನಡೆದಿರುವ ಸಾಧ್ಯತೆ ಇದೆ.
ಡಿವೈಡರ್ ದಾಟಿ ಬಂದ ಕಂಟೈನರ್ ಬಸ್‌ಗೆ ಡಿಕ್ಕಿ ಹೊಡೆದಿದೆ. ಬಸ್‌ನಲ್ಲಿ ಚಾಲಕ, ನಿರ್ವಾಹಕ ಸೇರಿ 32 ಜನರಿದ್ದರು.
21 ಗಾಯಾಳುಗಳು ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಂಕಿ ಹೊತ್ತಿಕೊಂಡ ಕೂಡಲೇ ಹಲವು ಪ್ರಯಾಣಿಕರು ಬಸ್‌ನಿಂದ ಜಿಗಿದು ಪ್ರಾಣ ಉಳಿಸಿಕೊಂಡಿದ್ದಾರೆ.
ಮೃತಪಟ್ಟವರ ಗುರುತು ಕೂಡ ಪತ್ತೆಯಾಗಿಲ್ಲ. ಹಾಸನ ಜಿಲ್ಲೆ, ಚನ್ನರಾಯಪಟ್ಟಣದ ಮಾನಸ ಹಾಗೂ ಆಕೆಯ ಗೆಳತಿ ನವ್ಯಾ ನಾಪತ್ತೆಯಾಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.