ADVERTISEMENT

ಕ್ರೈಸ್ತ ಸಮುದಾಯಕ್ಕೆ ಟಿಕೆಟ್‌: ಕೆಪಿಸಿಸಿ ಕಚೇರಿ ಎದುರು ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 6 ಮಾರ್ಚ್ 2024, 15:44 IST
Last Updated 6 ಮಾರ್ಚ್ 2024, 15:44 IST
   

ಬೆಂಗಳೂರು: ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್‌ನ್ನು ಕ್ರೈಸ್ತ ಸಮುದಾಯವರಿಗೆ ನೀಡಬೇಕು ಎಂದು ಆಗ್ರಹಿಸಿ ಆ ಸಮುದಾಯದವರು ಕೆಪಿಸಿಸಿ ಕಚೇರಿಯ ಮುಂಭಾಗದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.

‘ನಾವು ಅಲ್ಪಸಂಖ್ಯಾತ ಸಮುದಾಯಕ್ಕೆ‌ ಸೇರಿದವರು. ಪದೇ ಪದೇ ನಮಗೆ ಅನ್ಯಾಯವಾಗುತ್ತಿದೆ. ಅಲ್ಪಸಂಖ್ಯಾತರು ಎಂದು ಮುಸ್ಲಿಮರಿಗೆ ಅವಕಾಶ ಸಿಗುತ್ತಿದೆ. ಕ್ರೈಸ್ತ ಸಮುದಾಯಕ್ಕೆ ಅವಕಾಶಗಳೇ ಸಿಗುತ್ತಿಲ್ಲ. ಮುಸ್ಲಿಮರಿಗೆ ಟಿಕೆಟ್‌ ಕೊಡಬೇಡಿ ಎಂದು ನಾವು ಹೇಳುವುದಿಲ್ಲ. ರಾಜ್ಯದಲ್ಲಿ ನಮ್ಮ ಜನಸಂಖ್ಯೆಯೂ ಹೆಚ್ಚು ಇದೆ. ಹೀಗಾಗಿ, ನಮಗೆ ಪ್ರಾಧಾನ್ಯತೆ ನೀಡಬೇಕು’ ಎಂದು ಪ್ರತಿಭಟನಕಾರರು ಆಗ್ರಹಿಸಿದರು. 

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪತ್ರ ಬರೆದಿರುವ ಕರ್ನಾಟಕ ಕ್ರಿಶ್ಚಿಯನ್‌ ಪಾಲಿಟಿಕಲ್ ಲೀಡರ್ಸ್‌ ಫೋರಂ (ಕೆಸಿಪಿಎಲ್‌ಎಫ್‌), ‘ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಸುಮಾರು 15 ಲಕ್ಷ ಕ್ರೈಸ್ತರಿದ್ದಾರೆ . ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರು ಕೇಂದ್ರ ಕ್ಷೇತ್ರದಿಂದ ನಮ್ಮ ಸಮುದಾಯದ ಸಾಧು ಕೋಕಿಲ ಅವರಿಗೆ ಟಿಕೆಟ್‌ ನೀಡಬೇಕು ಅಥವಾ ಒಬ್ಬರನ್ನು ರಾಜ್ಯಸಭೆಗೆ ನಾಮ ನಿರ್ದೇಶನ ಮಾಡಬೇಕು’ ಎಂದು ಒತ್ತಾಯಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.