ADVERTISEMENT

ರಾಜ್ಯದಲ್ಲಿ ಕ್ರಿಸ್‌ಮಸ್‌ ಸಂಭ್ರಮ: ಯೇಸುವಿನ ಸ್ಮರಣೆ

​ಪ್ರಜಾವಾಣಿ ವಾರ್ತೆ
Published 25 ಡಿಸೆಂಬರ್ 2021, 3:32 IST
Last Updated 25 ಡಿಸೆಂಬರ್ 2021, 3:32 IST
ಬೆಂಗಳೂರಿನ ಸೇಂಟ್‌ ಮೇರಿ ಬೆಸಿಲಿಕಾ ಚರ್ಚ್‌ನಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲು ಸೇರಿದ್ದ ಜನಸಮೂಹ
ಬೆಂಗಳೂರಿನ ಸೇಂಟ್‌ ಮೇರಿ ಬೆಸಿಲಿಕಾ ಚರ್ಚ್‌ನಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲು ಸೇರಿದ್ದ ಜನಸಮೂಹ    

ಬೆಂಗಳೂರು: ರಾಜ್ಯದಲ್ಲಿ ಶನಿವಾರ ಕ್ರಿಸ್‌ಮಸ್‌ ಹಬ್ಬವನ್ನು ಕ್ರೈಸ್ತರು ಶ್ರದ್ಧಾಭಕ್ತಿಯಂದ ಆಚರಿಸುತ್ತಿದ್ದಾರೆ.

ಬೆಂಗಳೂರು, ಮಂಗಳೂರು, ಮೈಸೂರು, ಕಲಬುರ್ಗಿ ಸೇರಿದಂತೆ ವಿವಿಧ ನಗರಗಳು ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಕ್ರಿಸ್‌ಮಸ್‌ ಹಬ್ಬದ ಸಂಭ್ರಮ ಮನೆ ಮಾಡಿದೆ.

ಯೇಸುವಿನ ಸ್ಮರಣೆ ಮಾಡುತ್ತಿರುವ ಕ್ರೈಸ್ತ ಸಮುದಾಯದವರು ಚರ್ಚ್‌ಗಳಿಗೆ ತೆರಳಿ ವಿಶೇಷ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ.

ADVERTISEMENT

ಚರ್ಚ್‌ಗಳನ್ನು ಅಲಂಕರಿಸಲಾಗಿದ್ದು, ಕ್ರಿಸ್‌ಮಸ್‌ ಟ್ರೀಗಳನ್ನು ವಿದ್ಯುತ್ ದೀಪಗಳಿಂದ ಸಿಂಗರಿಸಲಾಗಿದೆ. ಸಾವಿರಾರು ಸಂಖ್ಯೆಯಲ್ಲಿ ಕ್ರೈಸ್ತರು ಚರ್ಚ್‌ಗೆ ಬಂದು ಮೇಣದ ಬತ್ತಿ ಬೆಳಗಿ, ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ರಾಷ್ಟ್ರದ ನಾಯಕರು ಹಾಗೂ ಗಣ್ಯರು ಕ್ರೈಸ್ತ ಸಮುದಾಯದವರಿಗೆ ಶುಭಾಶಯಗಳನ್ನು ಕೋರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.