ADVERTISEMENT

ಸಿಐಡಿ ಅಧಿಕಾರಿಗಳು, ಸಿಬ್ಬಂದಿ, ಸುರಕ್ಷತೆ: ರಾತ್ರಿ ಪ್ರಯಾಣಕ್ಕೆ ನಿರ್ಬಂಧ

​ಪ್ರಜಾವಾಣಿ ವಾರ್ತೆ
Published 8 ಸೆಪ್ಟೆಂಬರ್ 2022, 19:51 IST
Last Updated 8 ಸೆಪ್ಟೆಂಬರ್ 2022, 19:51 IST

ಬೆಂಗಳೂರು: ‘ಸಿಐಡಿ ಅಧಿಕಾರಿಗಳು, ಸಿಬ್ಬಂದಿ, ಸುರಕ್ಷತೆ ದೃಷ್ಟಿಯಿಂದ ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 6 ಗಂಟೆ ಅವಧಿಯಲ್ಲಿ ಯಾವುದೇ ವಾಹನದಲ್ಲಿ ಪ್ರಯಾಣಿಸಬಾರದು’ ಎಂದು ಸಿಐಡಿ ಡಿಜಿಪಿ ಸೂಚನೆ ನೀಡಿದ್ದಾರೆ.

ಕರ್ತವ್ಯದ ವೇಳೆ, ಕರ್ತವ್ಯದಿಂದ ಬಿಡುಗಡೆ ಹೊಂದಿದ ಸಂದರ್ಭದಲ್ಲಿ ಪೊಲೀಸರು ರಾತ್ರಿ ವೇಳೆ ಹೆಚ್ಚು ಸಂಚರಿಸುತ್ತಿದ್ದಾರೆ. ಇಂಥ ಸಂದರ್ಭದಲ್ಲಿ ಅಪಘಾತಗಳು ಸಂಭವಿಸುತ್ತಿದ್ದು, ಸಾವು–ನೋವುಗಳೂ ಘಟಿಸುಸುತ್ತಿವೆ. ಇದೇ ಕಾರಣಕ್ಕೆ ರಾತ್ರಿ ಪ್ರಯಾಣಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಗೊತ್ತಾಗಿದೆ. ಸೂಚನೆ ಆದೇಶವನ್ನು ಸಿಐಡಿಯ ಎಲ್ಲ ಡಿವೈಎಸ್ಪಿಗಳು, ಇನ್‌ಸ್ಪೆಕ್ಟರ್‌ಗಳಿಗೆ ಕಳುಹಿಸಲಾಗಿದೆ.

‘ಬಂದೋಬಸ್ತ್‌, ಚುನಾವಣೆ ಕರ್ತವ್ಯ, ತನಿಖೆ ಹಾಗೂ ಇನ್ನಿತರ ಕರ್ತವ್ಯಕ್ಕೆ ನಿಯೋಜನೆಗೊಳ್ಳುವವರು ಯಾವುದೇ ವಾಹನದಲ್ಲಿ ರಾತ್ರಿ ವೇಳೆ ಪ್ರಯಾಣಿಸಬಾರದು. ಕರ್ತವ್ಯದಲ್ಲಿ ಇಲ್ಲದಿದ್ದರೂ ಸುರಕ್ಷತೆ ದೃಷ್ಟಿಯಿಂದ ಯಾವುದೇ ಕಾರಣಕ್ಕೂ ರಾತ್ರಿ ಪ್ರಯಾಣಿಸಬಾರದು’ ಎಂದೂ ಡಿಜಿಪಿ ಸೂಚಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.