ADVERTISEMENT

ಮುಜರಾಯಿ ದೇವಸ್ಥಾನಗಳಲ್ಲಿ ಗೋಪೂಜೆಗೆ ಸೂಚನೆ

​ಪ್ರಜಾವಾಣಿ ವಾರ್ತೆ
Published 19 ಅಕ್ಟೋಬರ್ 2022, 16:31 IST
Last Updated 19 ಅಕ್ಟೋಬರ್ 2022, 16:31 IST
   

ಬೆಂಗಳೂರು: ದೀಪಾವಳಿಯ ಪ್ರಯುಕ್ತ ಬಲಿಪಾಡ್ಯಮಿಯಂದು ಮುಜರಾಯಿ ಇಲಾಖೆಯ ಅಧೀನದಲ್ಲಿರುವ ಎಲ್ಲ ದೇವಾಲಯಗಳಲ್ಲಿ ಗೋಪೂಜೆ ನೆರವೇರಿಸುವಂತೆ ಧಾರ್ಮಿಕ ದತ್ತಿ ಆಯುಕ್ತರು ಮಂಗಳವಾರ ಸುತ್ತೋಲೆ ಹೊರಡಿಸಿದ್ದಾರೆ.

2021ರಲ್ಲೂ ದೀಪಾವಳಿಯ ಬಲಿಪಾಡ್ಯಮಿಯಂದು ಗೋಪೂಜೆ ನೆರವೇರಿಸಲಾಗಿತ್ತು. ಅದೇ ಮಾದರಿಯಲ್ಲಿ ಈ ವರ್ಷದ ದೀಪಾವಳಿಯ ಬಲಿಪಾಡ್ಯಮಿ ದಿನವಾದ ಅಕ್ಟೋಬರ್‌ 26ರಂದು ಎಲ್ಲ ಅಧಿಸೂಚಿತ ದೇವಾಲಯಗಳಲ್ಲಿ ಶಾಸ್ತ್ರೋಕ್ತವಾಗಿ ಗೋಪೂಜೆ ನೆರವೇರಿಸಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಿದ್ದಾರೆ.

ಆ ದಿನ ಸಂಜೆ 5.30ರಿಂದ 6.30ರವರೆಗೆ ಗೋಧೂಳಿ ಲಗ್ನದಲ್ಲಿ ಗೋಪೂಜೆ ನೆರವೇರಿಸಬೇಕು. ಗೋವುಗಳನ್ನು ಸ್ನಾನ ಮಾಡಿಸಿ ದೇವಸ್ಥಾನಕ್ಕೆ ಕರೆತಂದು ಅರಿಶಿನ, ಕುಂಕುಮ, ಹೂವುಗಳಿಂದ ಅಲಂಕರಿಸಬೇಕು. ಅಕ್ಕಿ, ಬೆಲ್ಲ, ಸಿಹಿ ತಿನಿಸು ಸೇರಿದಂತೆ ಗೋಗ್ರಾಸವನ್ನು ಹಸುವಿಗೆ ನೀಡಿ ಪೂಜಿಸಬೇಕು.ಸಾರ್ವಜನಿಕರು ಗೋಪೂಜೆಯಲ್ಲಿ ಭಾಗವಹಿಸಲು ಅವಕಾಶ ನೀಡಬೇಕು ಎಂದು ಸೂಚಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.