ADVERTISEMENT

ಇಲಾಖೆಯಿಂದ ನೆನಪೋಲೆ ಸುತ್ತೋಲೆ

ದೇವಸ್ಥಾನಗಳ ಪ್ರಸಾದ ಗುಣಮಟ್ಟ

​ಪ್ರಜಾವಾಣಿ ವಾರ್ತೆ
Published 18 ಡಿಸೆಂಬರ್ 2018, 19:28 IST
Last Updated 18 ಡಿಸೆಂಬರ್ 2018, 19:28 IST

ಬೆಳಗಾವಿ: ದೇವರ ನೈವೇದ್ಯಕ್ಕಾಗಿ ಹಾಗೂ ದಾಸೋಹಕ್ಕಾಗಿ ಇರುವ ಅಡುಗೆ ಕೋಣೆಗಳಲ್ಲಿ ಕಡ್ಡಾಯವಾಗಿ ಸಿಸಿಟಿವಿ ಕ್ಯಾಮೆರಾ ಅಳವಡಿಸಬೇಕು ಎಂದು ಮುಜರಾಯಿ ಇಲಾಖೆ ನೆನಪೋಲೆ ಸುತ್ತೋಲೆ ಹೊರಡಿಸಿದೆ.

ಸುಳ್ವಾಡಿ ಮಾರಮ್ಮ ದೇವಸ್ಥಾನದ ದುರಂತದ ಬೆನ್ನಲ್ಲೇ, 20 ಅಂಶಗಳನ್ನು ಒಳಗೊಂಡ ಸುತ್ತೋಲೆ ಹೊರಡಿಸಿ, ‘ಅಡುಗೆ ಕೋಣೆಗೆ ಯಾರೇ ಅನಧಿಕೃತ ವ್ಯಕ್ತಿಗಳು ಪ್ರವೇಶಿಸದಂತೆ ಕಟ್ಟುನಿಟ್ಟಾಗಿ ಎಚ್ಚರ ವಹಿಸಬೇಕು’ ಎಂದು ಸೂಚಿಸಿದೆ. ಪ್ರಸಾದ ಸ್ವೀಕರಿಸಲು ಯೋಗ್ಯವಾಗಿದೆ ಎಂದು ಖಚಿತಪಡಿಸಿಕೊಂಡು ವಿತರಣೆ ಮಾಡಬೇಕು. ಭಕ್ತಾದಿಗಳಿಗೆ ಪ್ರಸಾದ ವಿತರಿಸುವ ಮುನ್ನ ಪೂರ್ವಭಾವಿ ಅನುಮತಿ ಪಡೆಯಬೇಕು. ಇದನ್ನು ಆರೋಗ್ಯ ಇಲಾಖೆಯ ಆಹಾರ ಸುರಕ್ಷತಾ ತಂಡದಿಂದ ಪರೀಕ್ಷೆಗೆ ಒಳಪಡಿಸಬೇಕು ಎಂದೂ ತಿಳಿಸಲಾಗಿದೆ.

‘ಪ್ರಸಾದ ತಯಾರಿ, ಸಿಸಿಟಿವಿ ಕ್ಯಾಮೆರಾ ಅಳವಡಿಸುವುದಕ್ಕೆ ಸಂಬಂಧಿಸಿದಂತೆ ನಾವು ಯಾವುದೇ ಸುತ್ತೋಲೆ ಹೊರಡಿಸಿಲ್ಲ’ ಎಂದು ಮುಜರಾಯಿ ಸಚಿವ ರಾಜಶೇಖರ ಪಾಟೀಲ ಹೇಳಿದರು.

ADVERTISEMENT

‘ಅದು 2012ರಲ್ಲಿ ಹೊರಡಿಸಿದ ಸುತ್ತೋಲೆ. ಘಟನೆ ಮರುಕಳಿಸಬಾರದು ಎಂಬ ಕಾರಣದಿಂದ ಮತ್ತೆ ನೆನಪಿಸಲಾಗಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.