ಬೆಂಗಳೂರು: ಕೇಂದ್ರ ಸರ್ಕಾರ ನಿರ್ದೇಶನ ನೀಡಿದ ಬಳಿಕವೇ ರಾಜ್ಯದಲ್ಲಿ ಪೌರತ್ವ (ತಿದ್ದುಪಡಿ) ಕಾಯ್ದೆ ಜಾರಿ ಮಾಡಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.
ಕಾಯ್ದೆ ಕುರಿತ ಮಾಹಿತಿಯನ್ನು ಸಾರ್ವಜನಿಕರಿಗೆ ಮುಂಚಿತವಾಗಿಯೇ ತಿಳಿಸಲಾಗುತ್ತದೆ. ಆದ್ದರಿಂದ ಅಪಪ್ರಚಾರಗಳಿಗೆ ಕಿವಿಗೊಡಬಾರದು ಎಂದು ಭಾನುವಾರ ತಿಳಿಸಿದರು.‘ಪ್ರಚೋದನಾತ್ಮಕ ಹೇಳಿಕೆ ನೀಡಿರುವುದರಿಂದ ಶಾಸಕ ಖಾದರ್ ವಿರುದ್ಧ ದೂರು ದಾಖಲಾಗಿದೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.