
ಪ್ರಜಾವಾಣಿ ವಾರ್ತೆ
ಬೆಂಗಳೂರು: ಪೌರತ್ವ (ತಿದ್ದುಪಡಿ) ಕಾಯ್ದೆಯಿಂದ ಮುಸಲ್ಮಾನರಿಗೆ ಯಾವ ರೀತಿಯಲ್ಲೂ ತೊಂದರೆ ಆಗುವುದಿಲ್ಲ. ರಾಷ್ಟ್ರಕ್ಕಾಗಿ ಒಂದು ಒಳ್ಳೆಯ ಕಾನೂನು ರೂಪುಗೊಂಡಿದೆ ಎಂದು ಬಿಜೆಪಿ ಸಹ ವಕ್ತಾರ ಅನ್ವರ್ ಮಾಣಿಪ್ಪಾಡಿ ಹೇಳಿದ್ದಾರೆ.
ಪಾಕಿಸ್ತಾನ, ಅಫ್ಗಾನಿಸ್ತಾನ, ಬಾಂಗ್ಲಾದಿಂದ ಭಾರತಕ್ಕೆ ನುಸುಳಿ ಬಂದಿದ್ದು, 14 ವರ್ಷಗಳಲ್ಲಿ 11 ವರ್ಷ ದೇಶದಲ್ಲೇ ಇದ್ದರೆ ಅಂತಹವರಿಗೆ ಪೌರತ್ವ ಸಿಗುತ್ತದೆ. 2014ರ ವರೆಗೂ ದೇಶದಲ್ಲಿ ನೆಲೆಸಿದ್ದು, ಆಧಾರ್ ಕಾರ್ಡ್, ಪಡಿತರ ಚೀಟಿಯಲ್ಲಿ ಹೆಸರು ನೋಂದಾಯಿಸಿದ್ದವರಿಗೆ ಯಾವುದೇ ಸಮಸ್ಯೆ ಆಗುವುದಿಲ್ಲ. ವಲಸೆ ಬಂದವರಿಂದ ಆಗುತ್ತಿರುವ ಸಮಸ್ಯೆಗಳನ್ನು ಮನಗಂಡು ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಪೌರತ್ವ (ತಿದ್ದುಪಡಿ) ಕಾಯಿದೆ ರೂಪಿಸಿದ್ದಾರೆ ಎಂದು ಅವರು ಹೇಳಿಕೆಯಲ್ಲಿ ಸ್ಪಷ್ಟಪಡಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.