ADVERTISEMENT

ಮಂಗಳೂರು| ಪ್ರತಿಭಟನೆಯಲ್ಲಿ ಇಬ್ಬರು ಗಂಭೀರ, ಕರ್ಫ್ಯೂ ಜಾರಿ, ಶಾಲೆಗಳಿಗೆ ರಜೆ

ಏಜೆನ್ಸೀಸ್
Published 19 ಡಿಸೆಂಬರ್ 2019, 15:17 IST
Last Updated 19 ಡಿಸೆಂಬರ್ 2019, 15:17 IST
   

ಮಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಇಂದು ಮಂಗಳೂರಿನಲ್ಲಿ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಘಟನೆಯಲ್ಲಿ 20 ಪೊಲೀಸರಿಗೆ ಗಾಯಗಳಾಗಿವೆ. ಇಬ್ಬರು ನಾಗರಿಕರ ಸ್ಥಿತಿ ಗಂಭೀರವಾಗಿದ್ದು, ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ನಗರದಲ್ಲಿ ಉದ್ರಿಕ್ತ ವಾತಾವರಣ ಮುಂದುವರಿದಿದ್ದು, ಹಂಪನಕಟ್ಟೆ, ಬಂದರು ಸೇರಿದಂತೆ ಉಪನಗರ ವ್ಯಾಪ್ತಿಯಲ್ಲಿ ಕರ್ಫ್ಯೂ ಜಾರಿ ಮಾಡಲಾಗಿದೆ.

ಮಂಗಳೂರಿನಉತ್ತರ, ದಕ್ಷಿಣ, ಪೂರ್ವ, ಬರ್ಕೆ ಮತ್ತು ಉರ್ವ ಠಾಣೆ ವ್ಯಾಪ್ತಿಯಲ್ಲಿ 20 ರಂದು ಮಧ್ಯರಾತ್ರಿವರೆಗೆ ಕರ್ಫ್ಯೂ ವಿಧಿಸಿ ನಗರ ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದಾರೆ.

ADVERTISEMENT

ಇನ್ನೊಂದೆಡೆ ಮಂಗಳೂರು ವಿಭಾಗದ ಸಾರಿಗೆ ಸಂಸ್ಥೆಯ ಡಿಪೋಟ್‌–2ರ ಮೇಲೆ ಕಲ್ಲು ತೂರಾಟ ನಡೆದಿದೆ. ಈ ವೇಳೆ ಇಬ್ಬರು ಗಾಯಗೊಂಡಿದ್ದಾರೆ. ಬಸ್‌ಗಳು ಹಾನಿಗೀಡಾಗಿವೆ.

ಮಂಗಳೂರು ಉದ್ರಿಕ್ತಗೊಂಡಿರುವ ಹಿನ್ನೆಲೆಯಲ್ಲಿ ಪಾಲಿಕೆ ವ್ಯಾಪ್ತಿಯ ಎಲ್ಲ ಶಾಲೆ–ಕಾಲೇಜುಗಳಿಗೆ ಶುಕ್ರವಾರ (ಡಿ.20) ರಜೆ ಘೋಷಣೆ ಮಾಡಿರುವುದಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್‌ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.