ADVERTISEMENT

ಬೆಂಗಳೂರು: ಸಿವಿಲ್‌ ನ್ಯಾಯಾಧೀಶರ ಹುದ್ದೆಗೆ ಲಿಂಗತ್ವ ಅಲ್ಪಸಂಖ್ಯಾತರ ಆಯ್ಕೆ

ಸಿವಿಲ್‌ ನ್ಯಾಯಾಧೀಶರ ಹುದ್ದೆ

​ಪ್ರಜಾವಾಣಿ ವಾರ್ತೆ
Published 18 ಫೆಬ್ರುವರಿ 2026, 16:33 IST
Last Updated 18 ಫೆಬ್ರುವರಿ 2026, 16:33 IST
   

ಬೆಂಗಳೂರು: ಸಿವಿಲ್‌ ನ್ಯಾಯಾಧೀಶರ ಹುದ್ದೆಗೆ ಇಬ್ಬರು ಲಿಂಗತ್ವ ಅಲ್ಪಸಂಖ್ಯಾತರೂ ಸೇರಿದಂತೆ ಒಟ್ಟು 83 ಮಂದಿ ಆಯ್ಕೆಯಾಗಿದ್ದಾರೆ.

ಕಳೆದ ಡಿಸೆಂಬರ್‌ನಲ್ಲಿ ಲಿಖಿತ ಪರೀಕ್ಷೆ ಹಾಗೂ 2026ರ ಜನವರಿಯಲ್ಲಿ ಸಂದರ್ಶನ ಪ್ರಕ್ರಿಯೆ ಬಳಿಕ ಜ್ಯೇಷ್ಠತೆ ಆಧಾರದಡಿ 83 ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ.

‘ಈ 83 ಮಂದಿಯನ್ನು ಮೀಸಲು, ಲಿಂಗತ್ವ ಅಲ್ಪಸಂಖ್ಯಾತರು, ಮಹಿಳಾ ಮತ್ತು ಮಾಜಿ ಯೋಧರ ಕೋಟಾ ಆಧರಿಸಿ ನೇಮಕಾತಿ ಮಾಡಲಾಗಿದೆ’ ಎಂದು ಹೈಕೋರ್ಟ್‌  ರಿಜಿಸ್ಟ್ರಾರ್‌ ಜನರಲ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.