ADVERTISEMENT

ಕೆರೆಗಳ ಸ್ವಚ್ಚತೆ ಬಗ್ಗೆ ಮಾಹಿತಿ ನೀಡಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್

​ಪ್ರಜಾವಾಣಿ ವಾರ್ತೆ
Published 21 ಮೇ 2020, 21:19 IST
Last Updated 21 ಮೇ 2020, 21:19 IST

ಬೆಂಗಳೂರು: ‘ಬೆಳ್ಳಂದೂರು, ವರ್ತೂರುಕೆರೆ ಹಾಗೂ ವೃಷಭಾವತಿ ನದಿಗಳ ಸ್ವಚ್ಛತೆ ಕಾಯ್ದುಕೊಳ್ಳಲು ಯಾವ ರೀತಿಯ ಕ್ರಮ ಕೈಗೊಳ್ಳಲಾಗುತ್ತದೆ ಎಂಬುದರ ಮಾಹಿತಿ ನೀಡಿ’ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ.

ವಕೀಲೆ ಗೀತಾ ಮಿಶ್ರಾ ಸಲ್ಲಿಸಿರುವ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್ ಎಸ್. ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತು.

ಪ್ರತಿವಾದಿಗಳಾದ ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಬಿಬಿಎಂಪಿ, ಬೆಂಗಳೂರು ಜಲಮಂಡಳಿ ಹಾಗೂ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಲಾಗಿದೆ.

ADVERTISEMENT

‘ಲಾಕ್‌ಡೌನ್ ಬಳಿಕ ವಾಣಿಜ್ಯ ಹಾಗೂ ಕೈಗಾರಿಕಾ ಚಟುವಟಿಕೆ ಸ್ಥಗಿತಗೊಂಡಿದ್ದ ಕಾರಣ ಬೆಳ್ಳಂದೂರು, ವರ್ತೂರು ಕೆರೆಗಳು ಹಾಗೂ ವೃಷಭಾವತಿ ನದಿ ಬಹುತೇಕ ಸ್ವಚ್ಛಗೊಂಡಿದೆ. ಈ ಕೆರೆಗಳ ಸುತ್ತಮುತ್ತಲ ಪ್ರದೇಶಗಳಲ್ಲಿ ಕಾರ್ಖಾನೆಗಳ ಕಾರ್ಯಾ
ರಂಭಕ್ಕೆ ಅನುಮತಿ ನೀಡಿದರೆ ಅವು ಮತ್ತೆ ಮಲಿನಗೊಳ್ಳಲಿವೆ’ ಎಂದು ಅರ್ಜಿದಾರರು ಆಕ್ಷೇಪಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.