ADVERTISEMENT

ಸಿ.ಎಂ ಬೊಮ್ಮಾಯಿ, ಸಿದ್ದರಾಮಯ್ಯ ಸೇರಿದಂತೆ ರಾಜ್ಯ ನಾಯಕರಿಂದ ಹೊಸ ವರ್ಷದ ಶುಭಾಶಯ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 1 ಜನವರಿ 2023, 4:28 IST
Last Updated 1 ಜನವರಿ 2023, 4:28 IST
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಸಿ.ಎಂ ಸಿದ್ದರಾಮಯ್ಯ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಸಿ.ಎಂ ಸಿದ್ದರಾಮಯ್ಯ   

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ರಾಜಕೀಯ ನಾಯಕರು ರಾಜ್ಯದ ಜನತೆಗೆ ಹೊಸ ವರ್ಷದ ಶುಭಾಶಯಗಳನ್ನು ಕೋರಿದ್ದಾರೆ.

’ನಾಡಿನ ಸಮಸ್ತ ಜನತೆಗೆ ಹೊಸ ವರ್ಷದ ಹಾರ್ದಿಕ ಶುಭಾಶಯಗಳು. 2023 ನಿಮ್ಮೆಲ್ಲರ ಬಾಳಿನಲ್ಲಿ ಸುಖ, ಶಾಂತಿ ನೆಮ್ಮದಿ ಹಾಗೂ ಸಮೃದ್ಧಿಯನ್ನು ತರಲಿ ಎಂದು ಶುಭ ಹಾರೈಸುತ್ತೇನೆ‘ ಎಂದು ಸಿ.ಎಂ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.

’ಹಸಿವು, ಅಜ್ಞಾನ, ಅನಾರೋಗ್ಯ ಮುಕ್ತ, ಸ್ವಾವಲಂಬಿ ಮತ್ತು ಸ್ವಾಭಿಮಾನಿ ನಾಡನ್ನು ಕಟ್ಟುವ ಸಂಕಲ್ಪ ಕೈಗೊಳ್ಳೋಣ. ಸುಳ್ಳನ್ನು ಸತ್ಯದಿಂದ, ಅನ್ಯಾಯವನ್ನು ನ್ಯಾಯದಿಂದ ಮತ್ತು ಅಧರ್ಮವನ್ನು ಧರ್ಮದಿಂದ ಎದುರಿಸುವ ಬದ್ದತೆಯ
ಹೊಸ ವರ್ಷ ನಮ್ಮದಾಗಲಿ‘ ಎಂದು ಮಾಜಿ ಸಿ.ಎಂ, ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ADVERTISEMENT

’ನಾಡಿನ ಸಮಸ್ತ ಜನತೆಗೆ ಹೊಸ ವರ್ಷದ ಹಾರ್ದಿಕ ಶುಭಾಶಯಗಳು. ಹೊಸ ವರ್ಷ ಬದಲಾವಣೆಗಳನ್ನು ಹೊತ್ತು ತರುತ್ತಿದೆ. ಗ್ಲೋಬಲ್‌ ಕರ್ನಾಟಕ ನಿರ್ಮಾಣದ ಗುರಿಗೆ ನಿಮ್ಮ ಬೆಂಬಲ ಅತ್ಯಗತ್ಯ. ಹೊಸ ವರುಷ ರಾಜ್ಯ ಹಾಗೂ ರಾಜ್ಯದ ಜನತೆಗೆ ಸಮೃದ್ಧಿಯ ವರ್ಷವಾಗಲಿ ಎಂದು ಹಾರೈಸುತ್ತೇನೆ‘ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಟ್ವೀಟ್ ಮಾಡಿದ್ದಾರೆ.

’ನಾಡಿನ ಸಮಸ್ತ ಜನರಿಗೆ ಹೊಸ ವರ್ಷದ ಹಾರ್ದಿಕ ಶುಭಾಶಯಗಳು. 2023ನೇ ವರ್ಷ ಕರ್ನಾಟಕದಲ್ಲಿ ಮಹತ್ವದ ಬದಲಾವಣೆಗೆ ಕಾರಣವಾಗಲಿದೆ ಹಾಗೂ ಕನ್ನಡಿಗರ ಸ್ವಾಭಿಮಾನದ ಕಹಳೆ ಮೊಳಗಲಿದೆ. ಎಲ್ಲಾ ಕನ್ನಡಿಗರಿಗೂ ಹೊಸ ವರ್ಷದಲ್ಲಿ ಒಳ್ಳೆಯದಾಗಲಿ ಹಾಗೂ ನಾಡಿನಲ್ಲಿ ಸುಖ ಶಾಂತಿ ನೆಮ್ಮದಿ ನೆಲೆಸಲಿ ಎಂದು ಹಾರೈಸುತ್ತೇನೆ‘ ಎಂದು ಮಾಜಿ ಸಿ.ಎಂ, ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

'ನಾಡಿನ ಸಮಸ್ತ ಜನತೆಗೆ ಹೊಸ ವರ್ಷದ ಹಾರ್ದಿಕ ಶುಭಾಶಯಗಳು. ಈ ನೂತನ ವರ್ಷ 2023 ಎಲ್ಲರ ಬಾಳಲ್ಲಿ ಸುಖ, ಶಾಂತಿ, ನೆಮ್ಮದಿ ಹಾಗೂ ಸಮೃದ್ಧಿಯನ್ನು ತರಲಿ ಎಂದು ಹಾರೈಸುತ್ತೇನೆ’ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಟ್ವೀಟ್ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.