ADVERTISEMENT

ವಿದ್ಯಾರ್ಥಿನಿಲಯ ಕಾಮಗಾರಿ ಶೀಘ್ರ ಆರಂಭಿಸಿ: ಸಿಎಂ ಬೊಮ್ಮಾಯಿ

​ಪ್ರಜಾವಾಣಿ ವಾರ್ತೆ
Published 29 ಅಕ್ಟೋಬರ್ 2022, 21:00 IST
Last Updated 29 ಅಕ್ಟೋಬರ್ 2022, 21:00 IST
ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ   

ಬೆಂಗಳೂರು: ಬಜೆಟ್‌ನಲ್ಲಿ ಘೋಷಿಸಿರುವ ಐದು ದೀನದಯಾಳ್ ಉಪಾಧ್ಯಾಯ ಸೌಹಾರ್ದ ವಿದ್ಯಾರ್ಥಿನಿಲಯಗಳು, 100 ಅಂಬೇಡ್ಕರ್ ವಿದ್ಯಾರ್ಥಿ ನಿಲಯಗಳು ಹಾಗೂ 12 ವಸತಿಶಾಲೆಗಳ ನಿರ್ಮಾಣಕ್ಕೆ ಮುಂದಿನ ಸಚಿವ ಸಂಪುಟ ಸಭೆಯ ನಂತರ ಚಾಲನೆ ನೀಡಲು ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದರು.

ಗೃಹ ಕಚೇರಿ ಕೃಷ್ಣಾದಲ್ಲಿ ಶನಿವಾರ ಅವರು ಲೋಕೋಪಯೋಗಿ ಇಲಾಖೆ ಮತ್ತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗಳ ಎಸ್‌ಸಿಪಿ, ಟಿಎಸ್‌ಪಿ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದರು.

‘₹ 400 ಕೋಟಿ ಅಂದಾಜು ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ದೀನದಯಾಳ್ ಉಪಾಧ್ಯಾಯ ಸೌಹಾ
ರ್ದ ವಿದ್ಯಾರ್ಥಿನಿಲಯಗಳ ನಿರ್ಮಾಣಕ್ಕೆ ಸಮಾಜ ಕಲ್ಯಾಣ,ಅಲ್ಪಸಂಖ್ಯಾತರ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗಳಿಂದ ಅನುದಾನ ಒಟ್ಟುಗೂಡಿಸಿ ವೆಚ್ಚ ಮಾಡಬೇಕು. ಎಸ್‌ಸಿಪಿ, ಟಿಎಸ್‌ಪಿ ಯೋಜನೆಯಡಿ ಲೋಕೋಪಯೋಗಿ ಇಲಾಖೆ ಮೂಲಕ 100 ಅಂಬೇಡ್ಕರ್ ವಸತಿಶಾಲೆಗಳು ಹಾಗೂ 12 ಕ್ರೈಸ್ ವಸತಿ ಶಾಲೆಗಳ ನಿರ್ಮಾಣಕ್ಕೆ ಮೊದಲ ಹಂತದಲ್ಲಿ ಲಭ್ಯವಿರುವ ₹ 243 ಕೋಟಿ ಬಳಸಿ ಕಾಮಗಾರಿ ಆರಂಭಿಸಬೇಕು’ ಎಂದರು.

ADVERTISEMENT

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವ್ಯಾಪ್ತಿಯಲ್ಲಿಯೂಈ ಯೋಜನೆಯಡಿ ಬಿಡುಗಡೆ ಮಾಡಿರುವ ಅನುದಾನವನ್ನು ನಿಗದಿತ ವೇಳಾಪಟ್ಟಿಯಂತೆ ವೆಚ್ಚ ಮಾಡುವಂತೆ ಮುಖ್ಯಮಂತ್ರಿ ಸೂಚಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.