ADVERTISEMENT

ಜ್ಯೋತಿ ಸಂಜೀವಿನಿ ಯೋಜನೆ ವಿಸ್ತರಣೆ ಚಿಂತನೆ: ಬೊಮ್ಮಾಯಿ

​ಪ್ರಜಾವಾಣಿ ವಾರ್ತೆ
Published 17 ಮಾರ್ಚ್ 2022, 21:53 IST
Last Updated 17 ಮಾರ್ಚ್ 2022, 21:53 IST

ಬೆಂಗಳೂರು: ‘ಸರ್ಕಾರಿ ನೌಕರರಿಗೆ ಜ್ಯೋತಿ ಸಂಜೀವಿನಿ ಯೋಜನೆಯಡಿ ಏಳು ಗಂಭೀರ ಸ್ವರೂಪದ ಕಾಯಿಲೆಗಳಿಗೆ ನಗದು ರಹಿತ ಚಿಕಿತ್ಸೆ ನೀಡಲಾಗುತ್ತಿದ್ದು, ಇತರ ಕಾಯಿಲೆಗಳಿಗೂ ಯೋಜನೆ ವಿಸ್ತರಿಸುವ ಚಿಂತನೆಯಿದೆ. ನಿವೃತ್ತ ನೌಕರರನ್ನು ಯೋಜನೆಗೆ ಒಳಪಡಿಸುವ ಬಗ್ಗೆ ಪರಿಶೀಲಿಸಲಾಗುವುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು.

ವಿಧಾನ ಪರಿಷತ್‌ನಲ್ಲಿ ಬಿಜೆಪಿಯ ಭಾರತಿ ಶೆಟ್ಟಿ ಅವರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ, ‘2015ರಿಂದ ಜ್ಯೋತಿ ಸಂಜೀವಿನಿ ಯೋಜನೆ ಜಾರಿಯಲ್ಲಿದೆ. ಹೃದ್ರೋಗ, ನರರೋಗ, ಕ್ಯಾನ್ಸರ್, ಮೂತ್ರಪಿಂಡ ಸಮಸ್ಯೆ, ಸುಟ್ಟಗಾಯ, ಅಪಘಾತ, ನವಜಾತ ಶಿಶು, ಚಿಕ್ಕಮಕ್ಕಳ ಕಾಯಿಲೆಗಳಿಗೆ ವಿವಿಧ ಶಸ್ತ್ರಚಿಕಿತ್ಸೆ ಹಾಗೂ ನಗದು ರಹಿತ ಚಿಕಿತ್ಸೆ ನೀಡಲಾಗುತ್ತಿದೆ‘ ಎಂದರು.

‘ಯೋಜನೆಯನ್ನು ನಿವೃತ್ತ ಸರ್ಕಾರಿ ನೌಕರರಿಗೂ ವಿಸ್ತರಿಸಿ, ಜೀವನದ ಸಂಧ್ಯಾಕಾಲದಲ್ಲಿ ನೆರವು ನೀಡಬೇಕು’ ಎಂದು ಭಾರತಿ ಶೆಟ್ಟಿ ಮನವಿ ಮಾಡಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.