ADVERTISEMENT

ಭದ್ರಾ ಮೇಲ್ದಂಡೆ: ಅನುದಾನಕ್ಕೆ ಸಿಎಂ ಬೊಮ್ಮಾಯಿ ಕೇಂದ್ರಕ್ಕೆ ಮನವಿ

ಕೋಲಾರ ಜಿಲ್ಲೆಯಲ್ಲಿ 75 ಕೆರೆ ನಿರ್ಮಾಣ; ಬೊಮ್ಮಾಯಿ

​ಪ್ರಜಾವಾಣಿ ವಾರ್ತೆ
Published 6 ಏಪ್ರಿಲ್ 2022, 19:08 IST
Last Updated 6 ಏಪ್ರಿಲ್ 2022, 19:08 IST
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನವದೆಹಲಿಯಲ್ಲಿ ಬುಧವಾರ ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿದರು. ಸಚಿವರಾದ ಗೋವಿಂದ ಕಾರಜೋಳ, ವಿ.ಸುನೀಲ್‌ಕುಮಾರ್‌ ಚಿತ್ರದಲ್ಲಿದ್ದಾರೆ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನವದೆಹಲಿಯಲ್ಲಿ ಬುಧವಾರ ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿದರು. ಸಚಿವರಾದ ಗೋವಿಂದ ಕಾರಜೋಳ, ವಿ.ಸುನೀಲ್‌ಕುಮಾರ್‌ ಚಿತ್ರದಲ್ಲಿದ್ದಾರೆ   

ನವದೆಹಲಿ: ಭದ್ರಾ ಮೇಲ್ದಂಡೆ ಯೋಜನೆಗೆ ಅಗತ್ಯವಿರುವ ಹಣಕಾಸಿನ ನೆರವು ನೀಡುವಂತೆ ರಾಜ್ಯ ಸರ್ಕಾರ ಬುಧವಾರ ಕೇಂದ್ರಕ್ಕೆ ಮನವಿ ಸಲ್ಲಿಸಿದೆ.

ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಬೆಳಿಗ್ಗೆ ಭೇಟಿ ಮಾಡಿ ರಾಜ್ಯದ ಕೆಲವು ಮಹತ್ವದ ಯೋಜನೆಗಳ ಸಾಕಾರದ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮನವಿ ಮಾಡಿದರು.

ರಾಷ್ಟ್ರೀಯ ಯೋಜನೆ ಎಂದು ಘೋಷಿತವಾಗಿರುವ ಭದ್ರಾ ಮೇಲ್ದಂಡೆ ಯೋಜನೆಗೆ ಅಂದಾಜು ₹ 23,000 ಕೋಟಿ ವೆಚ್ಚ ತಗುಲಲಿದೆ. ಕೇಂದ್ರದ ಪಾಲನ್ನು ಕೂಡಲೇ ಬಿಡುಗಡೆ ಮಾಡಲು ಕೇಂದ್ರ ಸಚಿವರನ್ನು ಕೋರಲಾಗಿದೆ ಎಂದು ಭೇಟಿಯ ನಂತರ ಬೊಮ್ಮಾಯಿ ಅವರು ಸುದ್ದಿಗಾರರಿಗೆ ತಿಳಿಸಿದರು.

ADVERTISEMENT

ಕೋಲಾರ ಜಿಲ್ಲೆಯಲ್ಲಿ 75 ಕೆರೆ:ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ವರ್ಷಾಚರಣೆ ಅಂಗವಾಗಿ ಪ್ರತಿ ಜಿಲ್ಲೆಯಲ್ಲಿ 75 ಕೆರೆಗಳನ್ನು ನಿರ್ಮಿಸಲು ಪ್ರಧಾನಿ ಕರೆ ನೀಡಿದ್ದಾರೆ. ಅವರ ಆಶಯದಂತೆ ಕೆರೆಗಳನ್ನು ನಿರ್ಮಿಸಲು ಸರ್ಕಾರ ಕಾರ್ಯಪ್ರವೃತ್ತವಾಗಲಿದೆ ಎಂದು ಅವರು ಹೇಳಿದರು.

ಆರಂಭಿಕ ಹಂತದಲ್ಲಿ ಬರಪೀಡಿತ ಕೋಲಾರ ಜಿಲ್ಲೆಯನ್ನು ಆಯ್ಕೆ ಮಾಡಿಕೊಂಡು ನಂತರ ಹಂತಹಂತವಾಗಿ ವಿವಿಧ ಜಿಲ್ಲೆಗಳಲ್ಲಿ ಕೆರೆಗಳ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ವಿವರಿಸಿದರು.

ರಾಯಚೂರಿನಲ್ಲಿ ಸಮ್ಮೇಳನ: ಅಂತರರಾಷ್ಟ್ರೀಯ ಸಿರಿಧಾನ್ಯ ದಿನಾಚರಣೆ ಅಂಗವಾಗಿ ರಾಜ್ಯದ ಸಿರಿ ಧಾನ್ಯ ಬೆಳೆಗಾರರನ್ನು ಪ್ರೋತ್ಸಾಹಿಸಲು ರಾಯಚೂರಿನಲ್ಲಿ ಸಮ್ಮೇಳನಕ್ಕೆ ನಿರ್ಧರಿಸಲಾಗಿದೆ ಎಂದರು. ಸಚಿವರಾದ ಗೋವಿಂದ ಕಾರಜೋಳ, ವಿ.ಸುನೀಲ್‌
ಕುಮಾರ್ ಹಾಜರಿದ್ದರು. ಇದಕ್ಕೂ ಮೊದಲು ಬಿಜೆಪಿ ಕೇಂದ್ರ ಕಚೇರಿಯಲ್ಲಿ ಬೆಳಿಗ್ಗೆ ಪಕ್ಷದ ಸಂಸ್ಥಾಪನಾ ದಿನಾಚರಣೆಯಲ್ಲಿ ಪಾಲ್ಗೊಂಡು ನಂತರ ಅವರು ರಕ್ಷಣಾ ಸಚಿವ ರಾಜನಾಥ ಸಿಂಗ್‌ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.