ಹುಬ್ಬಳ್ಳಿ: ‘ಕೋವಿಡ್ ಸಂಕಷ್ಟದಿಂದ ಈಗಷ್ಟೇ ಜನರು ಚೇತರಿಸಿಕೊಳ್ಳುತ್ತಿದ್ದಾರೆ. ಈ ಸಂದರ್ಭದಲ್ಲಿ ರೈತ ಸಂಘಟನೆಗಳು ಭಾರತ್ ಬಂದ್‌ಗೆ ಕರೆ ನೀಡಿರುವುದು ಸರಿಯಲ್ಲ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಸುದ್ದಿಗಾರರೊಂದಿಗೆ ಶನಿವಾರ ಮಾತನಾಡಿದ ಅವರು, ‘ಕೋವಿಡ್‌ನಿಂದಾಗಿ ಎಲ್ಲ ಕ್ಷೇತ್ರಗಳ ಕಾರ್ಯಚಟುವಟಿಕೆಗಳು ಕುಂಠಿತಗೊಂಡಿದ್ದವು. ಸದ್ಯ ಕೊರೊನಾ ಸೋಂಕು ಪ್ರಮಾಣ ಇಳಿಮುಖವಾಗುತ್ತಿದ್ದು, ಮಾರುಕಟ್ಟೆಯಲ್ಲಿ ವ್ಯಾಪಾರ, ವಹಿವಾಟು ಪುನರಾರಂಭವಾಗುತ್ತಿವೆ. ಈ ಸಂದರ್ಭದಲ್ಲಿ ಪ್ರತಿಭಟನೆ, ಬಂದ್ ನಡೆಸಿದರೆ ಜನಜೀವನದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ. ರೈತ ಸಂಘಟನೆಗಳು ಬಂದ್ ನಡೆಸದೆ ಸಹಕಾರ ನೀಡಬೇಕು’ ಎಂದು ವಿನಂತಿಸಿದರು.
ಇದನ್ನೂ ಓದಿ... ಕೃಷಿ ಕಾಯ್ದೆ ತಿದ್ದುಪಡಿಗೆ ವಿರೋಧ; ಭಾರತ್ ಬಂದ್ ಯಶಸ್ಸಿಗೆ ರೈತರು ಸಜ್ಜು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.