ಬೆಂಗಳೂರು: ರಾಜ್ಯದಲ್ಲಿ ಇಬ್ಬರಿಗೆ ಕೊರೊನಾದ ಓಮೈಕ್ರಾನ್ ರೂಪಾಂತರಿ ತಳಿ ಜಿನೋಮ್ ಸೀಕ್ವೆನ್ಸಿಂಗ್ ಮೂಲಕ ಪತ್ತೆಯಾಗಿರುವ ಹಿನ್ನೆಲೆಯಲ್ಲಿ, ಯಾವ ರೀತಿಯ ಔಷಧ ಹಾಗೂ ಚಿಕಿತ್ಸೆಯ ನಿಯಮಗಳನ್ನು ಪಾಲಿಸಬೇಕೆನ್ನುವ ಬಗ್ಗೆ ಇಂದು ತಜ್ಞರ ಸಭೆ ನಡೆಸಿ ಮಾಹಿತಿ ಪಡೆಯಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.
ದೆಹಲಿಯಿಂದ ಇಂದು ಬೆಂಗಳೂರಿಗೆ ಹಿಂದಿರುಗಿದ ಅವರು, ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.
ಈ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಪಡೆದುಕೊಳ್ಳಲು ಈಗಾಗಲೇ ಸೂಚನೆ ನೀಡಲಾಗಿದೆ. ಸೋಂಕಿತರ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಿತರನ್ನು ಕೇಸ್ ಹಿಸ್ಟರಿ ಸಮೇತ ಪತ್ತೆ ಹಚ್ಚಲಾಗುವುದು. ವೈದ್ಯಕೀಯವಾಗಿ ತಳಿ ಯಾವ ರೀತಿ ಇದೆ ಹಾಗೂ ಇದಕ್ಕೆ ವಿವಿಧ ದೇಶಗಳಲ್ಲಿ ಯಾವ ನಿಯಮಗಳನ್ನು ಅನುಸರಿಸಲಾಗುತ್ತಿದೆ ಎನ್ನುವ ಬಗ್ಗೆ ವಿಸ್ಕೃತವಾಗಿ ಸಭೆಯಲ್ಲಿ ಚರ್ಚಿಸಲಾಗುವುದು ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.