ADVERTISEMENT

ಕರ್ನಾಟಕಕ್ಕೆ ಅತಿ ಹೆಚ್ಚಿನ ಎಫ್‌ಡಿಐ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

​ಪ್ರಜಾವಾಣಿ ವಾರ್ತೆ
Published 22 ಮೇ 2022, 7:19 IST
Last Updated 22 ಮೇ 2022, 7:19 IST
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ   

ಬೆಂಗಳೂರು: ಕಳೆದ ತ್ರೈಮಾಸಿಕ ಅವಧಿಯಲ್ಲಿ ಭಾರತಕ್ಕೆ ವಿದೇಶಿ ನೇರ ಬಂಡವಾಳ ಹೂಡಿಕೆ ಅತಿ ಹೆಚ್ಚು ಬಂದಿದೆ. ಅದರಲ್ಲಿ ದೇಶದ ರಾಜ್ಯಗಳ ಪೈಕಿ ಕರ್ನಾಟಕ ರಾಜ್ಯಕ್ಕೆ ಅತಿ ಹೆಚ್ಚಿನ ಬಂಡವಾಳ ಹರಿದು ಬಂದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ದಾವೋಸ್‌ಗೆ ತೆರಳುವ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದರು.

ವಿಶ್ವ ಆರ್ಥಿಕ ಶೃಂಗ ಸಭೆಯಲ್ಲಿ ವಿಶ್ವದ ಹಲವಾರು ಪ್ರಮುಖರನ್ನು ಹಾಗೂ ಕೈಗಾರಿಕೋದ್ಯಮಿಗಳನ್ನು ಭೇಟಿಯಾಗಲಿದ್ದೇನೆ. ವಿದೇಶದವರು ಬಂಡವಾಳ ಹೂಡಲು ಮುಂದೆ ಬಂದಿದ್ದಾರೆ. ವಿಶ್ವ ಹೂಡಿಕೆದಾರರ ಸಮಾವೇಶಕ್ಕೆ ಉತ್ತಮ ಪ್ರತಿಕ್ರಿಯೆ ಸಿಗಲಿದೆ ಎಂಬ ನಂಬಿಕೆ ಇದೆ ಎಂದು ಮುಖ್ಯಮಂತ್ರಿ ತಿಳಿಸಿದರು.

ADVERTISEMENT

ಕೈಗಾರಿಕೆಗಳ ಸ್ಥಾಪನೆಗೆ ಕ್ರಮ ಈ ಬಾರಿ ಕೇವಲ ಒಪ್ಪಂದಗಳು ಮಾತ್ರವಲ್ಲದೆ, ಕೈಗಾರಿಕೆಗಳನ್ನು ಸ್ಥಾಪನೆ ಮಾಡಲು ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದರು.

ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಹಾಗೂ ಉನ್ನತ ಶಿಕ್ಷಣ ಹಾಗೂ ಐಟಿ-ಬಿಟಿ ಸಚಿವ ಡಾ. ಅಶ್ವತ್ಥ್ ನಾರಾಯಣ್ ದಾವೊಸ್‌ಗೆ ತಮ್ಮೊಂದಿಗೆ ಪ್ರಯಾಣಿಸುತ್ತಿರುವುದಾಗಿ ಮುಖ್ಯಮಂತ್ರಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.