ADVERTISEMENT

ಗಡಿ ಭಾಗದವರಿಗೆ ಮಹಾರಾಷ್ಟ್ರ ಸರ್ಕಾರದ ವಿಮೆ; ಹೇಗೆ ತಡೆಯಬೇಕು ಯೋಚಿಸುತ್ತೇನೆ:ಸಿಎಂ

​ಪ್ರಜಾವಾಣಿ ವಾರ್ತೆ
Published 15 ಮಾರ್ಚ್ 2023, 9:54 IST
Last Updated 15 ಮಾರ್ಚ್ 2023, 9:54 IST
ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ   

ಬೆಳಗಾವಿ: ‘ಕರ್ನಾಟಕ ಗಡಿ ಭಾಗದ 865 ಹಳ್ಳಿಗಳಿಗೂ ಅನ್ವಯ ಆಗುವಂತೆ ಮಹಾರಾಷ್ಟ್ರ ಸರ್ಕಾರ ಆರೋಗ್ಯ ವಿಮೆ ನೀಡಿದ್ದರೆ, ಅದನ್ನು ಪರಿಶೀಲಿಸಿ ಹೇಗೆ ತಡೆಯಬೇಕು ಯೋಚಿಸುತ್ತೇನೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ನಗರದಲ್ಲಿ ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಮಹಾರಾಷ್ಟ್ರ ಸರ್ಕಾರ ಆರೋಗ್ಯ ವಿಮೆ ನೀಡಿದ್ದಕ್ಕೆ ನಾನೇಕೆ ರಾಜೀನಾಮೆ ಕೊಡಬೇಕು. ನಾಡು, ನುಡಿ, ಗಡಿ ಜನರ ರಕ್ಷಣೆ ವಿಚಾರದಲ್ಲಿ ನಾನು ಡಿ.ಕೆ.ಶಿವಕುಮಾರ ಅವರಿಂದ ಪಾಠ ಕಲಿಯಬೇಕಾಗಿಲ್ಲ’ ಎಂದರು.

‘ನಾವು ಕೂಡ ಪಂಡರಪುರ, ತುಳಜಾಪುರಕ್ಕೆ ಹೋಗುವ ಕರ್ನಾಟಕದವರಿಗೆ ನೆರವು ನೀಡುತ್ತಿದ್ದೇವೆ. ಸದ್ಯ ಮಹಾರಾಷ್ಟ್ರ ಸರ್ಕಾರ ಯಾವ ಉದ್ದೇಶಕ್ಕೆ, ಏನು ಜಾರಿ ಮಾಡಿದೆ ನೋಡಿಕೊಂಡು ಹೆಜ್ಜೆ ಇಡುತ್ತೇನೆ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.