ಬೆಂಗಳೂರು: ಸಾರ್ವಜನಿಕರ ಹಿತದೃಷ್ಟಿಯಿಂದ ಕೋವಿಡ್ ನಿರ್ವಹಣೆಯಲ್ಲಿ ಸಕ್ರಿಯವಾಗಿ ಭಾಗವಹಿಸುವಂತೆ ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಬಿಜೆಪಿ ಕಚೇರಿಯಲ್ಲಿ ಪಕ್ಷದ ಪಕ್ಷದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಸಭೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
ಕೋವಿಡ್ ರೂಪಾಂತರ ತಳಿ ಓಮೈಕ್ರಾನ್ ಅನ್ನು ಯಾವ ರೀತಿ ನಿರ್ವಹಣೆ ಮಾಡಬೇಕು ಹಾಗೂ ಅದರಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ನಾವು ಸಕ್ರಿಯವಾಗಿ ಭಾಗವಹಿಸಿ ಮಾಹಿತಿ ನೀಡುವುದು, ಕ್ವಾರಂಟೈನ್ ನಲ್ಲಿ ಮಾರ್ಗದರ್ಶನ, ಆಂಬ್ಯುಲೆನ್ಸ್ ನಿರ್ವಹಣೆ, ಲಸಿಕೆ ಅಭಿಯಾನ ಮುಂತಾದ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸಬೇಕೆಂಬ ಕರೆಯನ್ನು ಕಾರ್ಯಕರ್ತರಿಗೆ ನೀಡಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.