ಬೆಂಗಳೂರು: ‘ಮಾಧ್ಯಮದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ನಾನು ದೆಹಲಿಗೆ ಹೋಗುತ್ತಿದ್ದೇನೆ. ಇದೇ ಸಂದರ್ಭದಲ್ಲಿ ಕೇಂದ್ರ ಜಲಶಕ್ತಿ ಸಚಿವರು ಮತ್ತು ಆರೋಗ್ಯ ಸಚಿವರನ್ನು ಭೇಟಿ ಮಾಡಲು ಪ್ರಯತ್ನಿಸುತ್ತೇನೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ದೆಹಲಿಗೆ ಹೊರಡುವ ಮೊದಲು ಸುದ್ದಿಗಾರರ ಜೊತೆ ಗುರುವಾರ ಬೆಳಿಗ್ಗೆ ಮಾತನಾಡಿದ ಅವರು, ‘ದೆಹಲಿಯಿಂದ ಸಂಜೆಯೇ ವಾಪಸ್ ಬರುತ್ತೇನೆ’ ಎಂದರು.
ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ ಅವರು, ‘ಯಲಹಂಕ ಶಾಸಕ ವಿಶ್ವನಾಥ್ ವಿಷಯದಲ್ಲಿ ಈಗಾಗಲೇ ಪೊಲೀಸರು ಕೇಸ್ ದಾಖಲು ಮಾಡಿಕೊಂಡಿದ್ದಾರೆ. ಪೊಲೀಸ್ ಕಮಿಷನರ್ ಪ್ರಾಥಮಿಕ ತನಿಖೆ ಮಾಡಲಿದ್ದಾರೆ. ಪೊಲೀಸರು ಕಾನೂನಿನ ಪ್ರಕಾರವೇ ತನಿಖೆ ನಡೆಸಲಿದ್ದಾರೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.