ADVERTISEMENT

ಮಸೂದ್‌, ಫಾಝಿಲ್ ಮನೆಗೂ ಭೇಟಿ ನೀಡುವೆ: ಸಿಎಂ ಬೊಮ್ಮಾಯಿ

​ಪ್ರಜಾವಾಣಿ ವಾರ್ತೆ
Published 1 ಆಗಸ್ಟ್ 2022, 21:15 IST
Last Updated 1 ಆಗಸ್ಟ್ 2022, 21:15 IST
ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ   

ಬೆಂಗಳೂರು: ‘ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊಲೆಯಾದ ಮಸೂದ್‌ ಮತ್ತು ಫಾಝಿಲ್ ಅವರ ಮನೆಗಳಿಗೂ ಮುಂದಿನ ದಿನಗಳಲ್ಲಿ ಭೇಟಿ ನೀಡುತ್ತೇನೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಸುದ್ದಿಗಾರರ ಜತೆ ಸೋಮವಾರ ಮಾತನಾಡಿದ ಅವರು, ಕೊಲೆಯಾಗಿರುವ ಮೂವರ ಪೈಕಿ ಬಿಜೆಪಿ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಮನೆಗೆ ಮಾತ್ರ ಭೇಟಿ ನೀಡಿರುವುದಕ್ಕೆ ವ್ಯಕ್ತವಾಗುತ್ತಿರುವ ಟೀಕೆಗಳ ಕುರಿತು ಪ್ರತಿಕ್ರಿಯಿಸಿದರು.

‘ಹಂತಕರ ಬಂಧನಕ್ಕೆ ಗಡುವು’

ADVERTISEMENT

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿರುವ ಮೂರು ಕೊಲೆ ಪ್ರಕರಣಗಳ ನೈಜ ಆರೋಪಿಗಳನ್ನು ಆಗಸ್ಟ್ 5ರೊಳಗೆ ಬಂಧಿಸದಿದ್ದರೆ, ಪಕ್ಷದ ಕಾರ್ಯಕರ್ತರು, ವಿವಿಧ ಸಂಘಟನೆಗಳ ಸದಸ್ಯರನ್ನು ಸೇರಿಸಿ ಮಂಗಳೂರಿನಲ್ಲಿ ಧರಣಿ ನಡೆಸಲಾಗುವುದು ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಎಚ್ಚರಿಸಿದರು. ಮಸೂದ್, ಪ್ರವೀಣ್ ನೆಟ್ಟಾರು, ಫಾಝಿಲ್ ಮನೆಗೆ ಸೋಮವಾರ ಭೇಟಿ ಕೊಟ್ಟು, ತಲಾ ₹ 5 ಲಕ್ಷ ನೆರವು ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.