ವಿಜಯಪುರ: ಜನವರಿ 3ರಂದು (ಮಂಗಳವಾರ) ನಡೆಯಲಿರುವ ಸಿದ್ಧೇಶ್ವರ ಶ್ರೀಗಳ ಅಂತಿಮ ಸಂಸ್ಕಾರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ, ಸಚಿವವರು ಪಾಲ್ಗೊಳ್ಳುತ್ತಿದ್ದಾರೆ.
ಹೆಲಿಕಾಫ್ಟರ್ ಮೂಲಕ ಮಧ್ಯಾಹ್ನ 2.40ಕ್ಕೆ ವಿಜಯಪುರ ಸೈನಿಕ ಶಾಲೆಯ ಹೆಲಿಪ್ಯಾಡ್‌ಗೆ ಬಂದಿಳಿಯುವ ಮುಖ್ಯಮಂತ್ರಿ ಅವರು ಶ್ರೀಗಳ ಅಂತಿಮ ದರ್ಶನ ಪಡೆಯಲಿದ್ದಾರೆ. ಬಳಿಕ ಸಂಜೆ 5ಕ್ಕೆ ಶ್ರೀಜ್ಞಾನ ಯೋಗಾಶ್ರಮದಲ್ಲಿ ನಡೆಯುವ ಶ್ರೀಗಳ ಅಂತಿಮ ಸಂಸ್ಕಾರದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.