ADVERTISEMENT

ಮಂಡಗದ್ದೆ ಪಕ್ಷಿಧಾಮ ಘೋಷಣೆಗೆ ಸಿಎಂ ಸೂಚನೆ

​ಪ್ರಜಾವಾಣಿ ವಾರ್ತೆ
Published 22 ಅಕ್ಟೋಬರ್ 2021, 16:34 IST
Last Updated 22 ಅಕ್ಟೋಬರ್ 2021, 16:34 IST

ಬೆಂಗಳೂರು: ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನಲ್ಲಿ ರಾಷ್ಟ್ರೀಯ ಹೆದ್ದಾರಿ–169ರ ಪಕ್ಕದಲ್ಲಿ ತುಂಗಾ ನದಿಯ ನಡುವೆ ಇರುವ ಮಂಡಗದ್ದೆ ಪಕ್ಷಿಧಾಮವನ್ನು ಅಧಿಕೃತ ಪಕ್ಷಿಧಾಮ ಎಂದು ಘೋಷಿಸಿ ಅಧಿಸೂಚನೆ ಹೊರಡಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರವಾಸೋದ್ಯಮ ಇಲಾಖೆಗೆ ಸೂಚನೆ ನೀಡಿದ್ದಾರೆ.

ತೀರ್ಥಹಳ್ಳಿ ಕ್ಷೇತ್ರದ ಶಾಸಕರೂ ಆಗಿರುವ ಗೃಹ ಸಚಿವ ಆರಗ ಜ್ಞಾನೇಂದ್ರ, ಮಂಡಗದ್ದೆ ಪಕ್ಷಿಧಾಮವನ್ನು ಪ್ರವಾಸೋದ್ಯಮದ ಹಿತದೃಷ್ಟಿಯಿಂದ ಅಧಿಕೃತ ಪಕ್ಷಿಧಾಮ ಎಂದು ಘೋಷಿಸುವಂತೆ ಕೋರಿ ಮುಖ್ಯಮಂತ್ರಿಯವರಿಗೆ ಪತ್ರ ಬರೆದಿದ್ದರು. ಗೃಹ ಸಚಿವರ ಕೋರಿಕೆಯಂತೆ ಅಧಿಕೃತ ಪಕ್ಷಿಧಾಮ ಎಂದು ಘೋಷಿಸಿ ಅಧಿಸೂಚನೆ ಹೊರಡಿಸುವಂತೆ ಮುಖ್ಯಮಂತ್ರಿ ಸೂಚನೆ ನೀಡಿದ್ದರು.

ಪ್ರವಾಸೋದ್ಯಮ ಇಲಾಖೆಯ ಪ್ರಧಾನ ಕಾರ್ಯದರ್ಶಿಯವರಿಗೆ ಶುಕ್ರವಾರ ಪತ್ರ ಬರೆದಿರುವ ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್‌. ಮಂಜುನಾಥ್‌ ಪ್ರಸಾದ್‌, ಮಂಡಗದ್ದೆ ಪಕ್ಷಿಧಾಮಕ್ಕೆ ಸಂಬಂಧಿಸಿದಂತೆ ಅಧಿಸೂಚನೆ ಹೊರಡಿಸಲು ಕ್ರಮ ಕೈಗೊಳ್ಳುವಂತೆ ಕೋರಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.